ಬೆಂಗಳೂರು: ಜೂ.20ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬಹುನಿರೀಕ್ಷಿತ 15,000 ಕೋಟಿ ವೆಚ್ಚದ ಬೆಂಗಳೂರು ಉಪನಗರ ರೈಲು ಯೋಜನೆಗೆ ಅಡಿಗಲ್ಲು ಹಾಕಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗೋವಿಂದರಾಜನಗರ ಕ್ಷೇತ್ರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಈ ಮಹತ್ವದ ಘೋಷಣೆ ಮಾಡಿದ್ದಾರೆ.
ಪಿಪಿಪಿ ಮಾದರಿಯಡಿ 15,767 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. 148.17 ಕಿ.ಮೀ. ವೆಚ್ಚದಲ್ಲಿ ನಾಲ್ಕು ಪ್ರತ್ಯೇಕ ಕಾರಿಡಾರ್ಗಳನ್ನು ಹೊಂದಿರಲಿದೆ. ಬೆಂಗಳೂರು- ದೇವನಹಳ್ಳಿ (41.40 ಕಿ.ಮೀ), ಬೈಯ್ಯಪ್ಪನಹಳ್ಳಿ-ಚಿಕ್ಕಬಾಣಾವರ (25.01 ಕಿ.ಮೀ), ಕೆಂಗೇರಿ-ಬೆಂಗಳೂರು ಕಂಟೋನ್ಮೆಂಟ್ (35.52 ಕಿ.ಮೀ.) ಮತ್ತು ಹೀಲಲಿಗೆ-ರಾಜನುಕುಂಟೆ (46.24 ಕಿ.ಮೀ) ನಾಲ್ಕು ಕಾರಿಡಾರ್ನಲ್ಲಿ ಯೋಜನೆ ಕಾರ್ಯರೂಪಕ್ಕೆ ಬರಲಿದೆ.
ಯೋಜನೆಯಡಿ 62 ನಿಲ್ದಾಣಗಳು, ಎಲಿವೇಟೆಡ್ ಮಾರ್ಗ 22 ಹಾಗೂ at grade 40 ಹೊಂದಿರಲಿದೆ. ಎಲಿವೇಟೆಡ್ ಮಾರ್ಗ 55.57 ಕಿ.ಮೀ ಇದ್ದರೆ, at grade 75.55 ಕಿ.ಮೀ + 17.05 ಕಿ.ಮೀ ಉದ್ದ ಇರಲಿದೆ. 101.7 ಎಕರೆ ಖಾಸಗಿ ಭೂಮಿಯ ಅವಶ್ಯಕತೆ ಇದೆ. ಇದರ ಸ್ವಾಧೀನಕ್ಕಾಗಿ 1,419 ಕೋಟಿ ರೂ. ವೆಚ್ಚವಾಗಲಿದೆ. 2026ರಲ್ಲಿ ಯೋಜನೆಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.