ಕರ್ನಾಟಕ

karnataka

ETV Bharat / city

ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ.. ಆಟೋ ಚಾಲಕರಿಗೆ ಖಾಕಿ ಎಚ್ಚರಿಕೆ - Police alerted auto drivers at benglure

ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ 50ಕ್ಕೂ ಹೆಚ್ಚು ಆಟೋ ಚಾಲಕರಿಗೆ ಅಧಿಕ ಹಣ ವಸೂಲಿ ಮಾಡುವುದನ್ನು ನಿಲ್ಲಿಸುವಂತೆ ಎಚ್ಚರಿಕೆ. ಜೊತೆಗೆ ಆಟೋ ದರಗಳ ಬಗ್ಗೆ ಮೇಲ್ವಿಚಾರಣೆ..

Police alerted auto drivers at benglure
Police alerted auto drivers at benglure

By

Published : Dec 13, 2020, 6:40 AM IST

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆ ಪ್ರಯಾಣಿಕರಿಂದ ಅಧಿಕ ಹಣ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಪಶ್ಚಿಮ ವಿಭಾಗದ‌‌ ಪೊಲೀಸರು ಎಚ್ಚರಿಕೆ ನೀಡಿದರು.

ಸಿಟಿ ಮಾರ್ಕೆಟ್, ಮೆಜೆಸ್ಟಿಕ್ ಸೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರಯಾಣಿಕರಿಂದ ಖಾಸಗಿ ವಾಹನ ಮಾಲೀಕರು ಹೆಚ್ಚು ಹಣ ವಸೂಲಿ ಮಾಡಿದ ಆರೋಪ ಕೇಳಿ ಬಂದ‌ ಹಿನ್ನೆಲೆ ಪಶ್ಚಿಮ ವಿಭಾಗದ ಪೊಲೀಸರು ಖುದ್ದು ಫೀಲ್ಡ್​ಗಿಳಿದಿದ್ದರು.

ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ 50ಕ್ಕೂ ಹೆಚ್ಚು ಆಟೋ ಚಾಲಕರಿಗೆ ಅಧಿಕ ಹಣ ವಸೂಲಿ ಮಾಡುವುದನ್ನು ನಿಲ್ಲಿಸುವಂತೆ ತಿಳಿಸಿದರು. ಜೊತೆಗೆ ಆಟೋ ದರಗಳ ಬಗ್ಗೆ ಮೇಲ್ವಿಚಾರಣೆ ನಡೆಸಿದರು.

ABOUT THE AUTHOR

...view details