ಬೆಂಗಳೂರು :ಕೆಲಸದ ಅವಧಿ ಮೀರಿದರೂ ಹೆಚ್ಚುವರಿ ಕೆಲಸ, ರಜೆ ನೀಡುವಲ್ಲಿ ತಾರತಮ್ಯ ಹಾಗೂ ಸರ್ಕಾರಿ ವಾಹನ ದುರ್ಬಳಕೆ ಸೇರಿದಂತೆ ವಿಧಾನಸೌಧ ಭದ್ರತಾ ವಿಭಾಗದ ಪೊಲೀಸ್ ಅಧಿಕಾರಿ ವಿರುದ್ಧ ಚಾಲಕನೋರ್ವ ನೋವಿನಿಂದ ಬರೆದಿರುವ ಪತ್ರ ವೈರಲ್ ಆಗಿದೆ.
ಪೊಲೀಸ್ ಇಲಾಖೆಯನ್ನು ಶಿಸ್ತಿನ ಇಲಾಖೆ ಎಂದೇ ಕರೆಯಲಾಗುತ್ತದೆ. ಆದರೆ, ಕಳೆದ ಮೂರು ವರ್ಷಗಳಿಂದ ವಿಧಾನಸೌಧದ ಭದ್ರತಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಯೋರ್ವರು ಚಾಲಕರ ಕೆಲಸ ಆರು ಗಂಟೆಯಾದರೂ 12 ರಿಂದ 14 ಗಂಟೆಗಳ ಕಾಲ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ತಮ್ಮ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ರಜೆ ನೀಡದೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಆರೋಗ್ಯ ಸಮಸ್ಯೆಯಿದ್ದರೂ ರಜೆ ರದ್ದುಪಡಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಕಿರಿಕಿರಿ ಮಾಡಲಾಗುತ್ತಿದೆ. ರಜೆ ವಿಚಾರದಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಎಂದು ತಾರತಮ್ಯ ಎಸಗಲಾಗುತ್ತಿದೆ ಎಂದು ಬರೆದಿರುವ ಪತ್ರ ವೈರಲ್ ಆಗುತ್ತಿದೆ.