ಬೆಂಗಳೂರು: ಇಂದು ಶ್ರೀರಾಮ ನವಮಿ ಆಚರಣೆ ಹಿನ್ನೆಲೆ ಪಾದರಾಯನಪುರದಲ್ಲಿರುವ ಶ್ರೀರಾಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಅಭಿಷೇಕ ನಡೆಯಲಿದೆ. ಬಳಿಕ ಪಾನಕ, ಮಜ್ಜಿಗೆ ವಿತರಣೆಯಾಗಲಿದೆ. ಸೂಕ್ಷ್ಮ ಪ್ರದೇಶವಾಗಿರುವುದರಿಂದ ಇಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಖಾಕಿ ಕಟ್ಟೆಚ್ಚರ ವಹಿಸಿದೆ. ಭದ್ರತೆಗಾಗಿ ಒಂದು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಜತೆಗೆ ಬೆಂಗಳೂರು ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಶ್ರೀರಾಮ ನವಮಿ ಹಿನ್ನೆಲೆ ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳಲ್ಲಿ ಖಾಕಿ ಕಟ್ಟೆಚ್ಚರ
ರಾಮ ನವಮಿ ಹಿನ್ನೆಲೆ ರಾಜಧಾನಿಯಲ್ಲಿ ಖಾಕಿ ಪಡೆ ಅಲರ್ಟ್ ಆಗಿದೆ. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.
ರಾಮ ನವಮಿ ಹಿನ್ನೆಲೆ ರಾಜಧಾನಿಯಲ್ಲಿ ಖಾಕಿ ಅಲರ್ಟ್
ನಗರ ಪೊಲೀಸ್ ಆಯುಕ್ತರಿಂದ ಸೂಚನೆ ಬಂದ ಹಿನ್ನೆಲೆ ಬೆಂಗಳೂರಿನ ವಿವಿಧ ಸೂಕ್ಷ್ಮ ಪ್ರದೇಶಗಳಲ್ಲಿ ಆಯಾ ಡಿಸಿಪಿಗಳು, ಠಾಣಾ ಇನ್ಸ್ಪೆಕ್ಟರ್ಗಳಿಗೆ ಭದ್ರತೆ ಹೊಣೆ ಹೊರಿಸಲಾಗಿದೆ. ಪ್ರತಿ ಠಾಣಾ ವ್ಯಾಪ್ತಿಯಲ್ಲಿ ಸಿಬ್ಬಂದಿ ಭದ್ರತೆ ವಹಿಸಿದ್ದಾರೆ.
ಇದನ್ನೂ ಓದಿ:ಬೆಂಗಳೂರು-ಎಲ್ಲೆಡೆ ಶ್ರೀರಾಮ ನವಮಿ ಸಡಗರ: ದೇಗುಲಗಳಲ್ಲಿ ವಿಶೇಷ ಪೂಜಾ ಕೈಂಕರ್ಯ