ಕರ್ನಾಟಕ

karnataka

ETV Bharat / city

ಮುಂದುವರೆದ ಉತ್ತರ ಭಾರತದ ಕಾರ್ಮಿಕರ ವಲಸೆ: ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಖಾಕಿ ಹೈ ಅಲರ್ಟ್ - ಯಶವಂತಪುರ ರೈಲ್ವೆ ನಿಲ್ದಾಣ

ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಉತ್ತರ ಭಾರತದ ವಿವಿಧ ರಾಜ್ಯಗಳು ಹಾಗೂ ಜಿಲ್ಲೆಗಳಿಗೆ ತೆರಳುತ್ತಿರುವ ಪ್ರಯಾಣಿಕರ ಮೇಲೆ ನಿಗಾ ವಹಿಸಲು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

Bangalore
ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಖಾಕಿ ಹೈ ಅಲರ್ಟ್

By

Published : May 6, 2021, 10:25 AM IST

ಬೆಂಗಳೂರು:ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ನಿಧಾನವಾಗಿ ಹೆಚ್ಚಾಗುವುದು ಕಂಡುಬರುತ್ತಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಖಾಕಿ ಹೈ ಅಲರ್ಟ್

ಸುಖಾಸುಮ್ಮನೆ ರೈಲು ನಿಲ್ದಾಣದ ಮುಂಭಾಗ ನಿಲ್ಲುವಂತಿಲ್ಲ. ಹೀಗೆ ನಿಂತಿದ್ದವರನ್ನು ಪ್ರಶ್ನಿಸಿ ಪೊಲೀಸರು ಕಳುಹಿಸುತ್ತಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಅನಗತ್ಯವಾಗಿ ನಿಲ್ಲುವುದು, ಗುಂಪು ಸೇರುವುದಕ್ಕೆ ಬ್ರೇಕ್ ಹಾಕಿದ್ದಾರೆ. ಇದರ ನಡುವೆಯೂ ಪ್ರಯಾಣಿಕರ ಓಡಾಟ ಮುಂದುವರೆದಿದೆ.

ಉತ್ತರ ಭಾರತದ ವಿವಿಧ ರಾಜ್ಯಗಳು ಹಾಗೂ ಜಿಲ್ಲೆಗಳಿಗೆ ತೆರಳುತ್ತಿರುವ ಪ್ರಯಾಣಿಕರ ಮೇಲೆ ನಿಗಾ ವಹಿಸಲು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದರಿಂದಾಗಿ ಸುಖಾಸುಮ್ಮನೆ ರೈಲು ನಿಲ್ದಾಣದಲ್ಲಿ ಅಡ್ಡಾಡುವುದು ಸ್ವಲ್ಪಮಟ್ಟಿಗೆ ನಿಯಂತ್ರಣಕ್ಕೆ ಬಂದಿದೆ.

ಓದಿ:ಆಕ್ಸಿಜನ್ ದುರಂತದ ಬೆನ್ನಲ್ಲೇ ಬೆಡ್ ಕೊರತೆ... ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಬಗೆಹರಿಯದ ಸಮಸ್ಯೆ

ABOUT THE AUTHOR

...view details