ಬೆಂಗಳೂರು:ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ್ದ ರೌಡಿ ಕಾಲಿಗೆ ಸಂಜಯನಗರ ಪೊಲೀಸ್ ಅಧಿಕಾರಿ ಗುಂಡು ಹಾರಿಸಿ ಬಂಧಿಸಿದ್ದಾರೆ.
ರೌಡಿಶೀಟರ್ ಕಾಲಿಗೆ ಬುಲೆಟ್ ನುಗ್ಗಿಸಿದ ಪೊಲೀಸ್ ಅಧಿಕಾರಿ ಸಂಜಯನಗರ ಪೊಲೀಸ್ ಠಾಣೆಯ ರೌಡಿ ಶರಣಪ್ಪ ಕಾಲಿಗೆ ಗುಂಡೇಟು ತಗುಲಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರೌಡಿ ಶೀಟರ್ ಶರಣಪ್ಪ ವಿರುದ್ಧ, ಕೊಲೆ, ಕೊಲೆಯತ್ನ ಹಾಗೂ ಜೀವ ಬೆದರಿಕೆ ಸೇರಿದಂತೆ 10 ಪ್ರಕರಣ ದಾಖಲಾಗಿವೆ. ಈ ಘಟನೆಯಲ್ಲಿ ಕಾನ್ಸ್ಟೇಬಲ್ ಮಲ್ಲಪ್ಪ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡಿರುವ ಕಾನ್ಸ್ಟೇಬಲ್ ಮಲ್ಲಪ್ಪ ಓದಿ:ಶ್ರೀನಗರದಲ್ಲಿ ಆಕಸ್ಮಿಕವಾಗಿ ಗುಂಡು ತಗುಲಿ ವಿಜಯಪುರದ ಯೋಧ ಮೃತ
ನಿರಂತರ ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ. ಕೆಲ ದಿನಗಳ ಹಿಂದೆ ಶರಣಪ್ಪ ಆ್ಯಂಡ್ ಗ್ಯಾಂಗ್ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಇನ್ಸ್ಪೆಕ್ಟರ್ ಬಾಲರಾಜ್, ಆರೋಪಿಗಾಗಿ ಬಲೆ ಬೀಸಿದ್ದರು.
ಇಂದು ಬೆಳಗ್ಗೆ ಭೂಪಸಂದ್ರ ಬಳಿ ಅಡಗಿಕೊಂಡಿರುವ ಮಾಹಿತಿ ಮೇರೆಗೆ ಬಾಲರಾಜ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಆರೋಪಿಯನ್ನು ಬಂಧಿಸಲು ಮುಂದಾದಾಗ ಹರಿತವಾದ ಆಯುಧದಿಂದ ಕಾನ್ಸ್ಟೇಬಲ್ ಮಲ್ಲಪ್ಪನ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಶರಣಾಗುವಂತೆ ಸೂಚಿಸಿದರೂ ಕ್ಯಾರೇ ಅನ್ನದ ಆರೋಪಿ ಮೇಲೆ ಆತ್ಮರಕ್ಷಣೆಗಾಗಿ ಇನ್ಸ್ಪೆಕ್ಟರ್ ಬಾಲರಾಜ್ ತಮ್ಮ ಸರ್ವೀಸ್ ಪಿಸ್ತೂಲ್ನಿಂದ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದರು.