ಪೊಲೀಸ್ ಠಾಣೆಗಳ ಜೊತೆಗೆ ಕ್ವಾಟರ್ಸ್ಗೂ ಹಬ್ಬಿದ ಕೊರೊನಾ
ಬೆಂಗಳೂರಿನ ಕೋರಮಂಗಲ ಪೊಲೀಸ್ ಕ್ವಾಟರ್ಸ್ನಲ್ಲಿರುವ ಆಸ್ಪತ್ರೆಯಲ್ಲಿ ಕೆಲಸ ಮಾಡುವ ನರ್ಸ್ ಮತ್ತು ವಾರ್ಡ್ ಬಾಯ್ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಪತ್ತೆಹಚ್ಚುವಲ್ಲಿ ಬಿಬಿಎಂಪಿ ಆರೋಗ್ಯಾಧಿಕಾರಿಗಳು ನಿರತರಾಗಿದ್ದಾರೆ.
ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವಾರಿಯರ್ ಆಗಿ ಕೆಲಸ ನಿರ್ವಹಣೆ ಮಾಡುವ ಪೊಲೀಸರಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸದ್ಯ ಕ್ವಾಟರ್ಸ್ನ ಒಳಗಿದ್ದ ಆಸ್ಪತ್ರೆಯಲ್ಲಿದ್ದವರಿಗೆ ಕೊರೊನಾ ಸೋಂಕು ತಗುಲಿದೆ.
ಕೋರಮಂಗಲ ಪೊಲೀಸ್ ಕ್ವಾಟರ್ಸ್ನಲ್ಲಿ ಪೊಲೀಸರ ಆರೋಗ್ಯ ನೋಡಿಕೊಳ್ಳಲು ಆಸ್ಪತ್ರೆ ಇದ್ದು, ಅಲ್ಲಿ ಕೆಲಸ ನಿರ್ವಹಣೆ ಮಾಡುವ ನರ್ಸ್ ಮತ್ತು ವಾರ್ಡ್ ಬಾಯ್ಗೆ ಕೊರೊನಾ ಪಾಸಿಟಿವ್ ಬಂದಿದೆ.
ಸರ್ಕಾರಿ ಆಸ್ಪತ್ರೆಯಾಗಿರುವ ಕಾರಣ ಸಾಕಷ್ಟು ಜನ ಕ್ವಾಟರ್ಸ್ ಆಸ್ಪತ್ರೆಗೆ ಬಂದು ಹೋಗಿದ್ರು. ಇದು ಈಗ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ನರ್ಸ್ ಮತ್ತು ವಾರ್ಡ್ ಬಾಯ್ ಸಂಪರ್ಕದಲ್ಲಿರುವವರನ್ನ ಪತ್ತೆ ಮಾಡುವ ಕಾರ್ಯವನ್ನು ಬಿಬಿಎಂಪಿ ಅಧಿಕಾರಿಗಳು ನಡೆಸುತ್ತಿದ್ದಾರೆ.