ಬೆಂಗಳೂರು : ರಾಜ್ಯಾದ್ಯಂತ ಲಾಕ್ ಡೌನ್ ಘೋಷಿಸಿದ ಹಿನ್ನೆಲೆಯಲ್ಲಿ, ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕುವ ಪೊಲೀಸರ ಕಾರ್ಯಾಚರಣೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ನೂರಾರು ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ನಡೆದ ಪೊಲೀಸರ ಕಾರ್ಯಚರಣೆಯಲ್ಲಿ ದ್ವಿಚಕ್ರ ವಾಹನ, ಕಾರು, ಆಟೋ ಸೇರಿದಂತೆ ಒಟ್ಟು 1,404 ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ.