ಬೆಂಗಳೂರು: ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣದ ತನಿಖೆ ಚರುಕು ಪಡೆದುಕೊಂಡಿದೆ. ಡಿಸಿಪಿ ಸಂಜೀವ್ ಪಾಟೀಲ್, ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹಲವು ಸ್ಥಳೀಯರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.
ಪ್ರಕರಣದಲ್ಲಿ ಒಟ್ಟು 7 ಸಿಸಿಟಿವಿ ಕ್ಯಾಮರಾಗಳನ್ನು ತಿರುಗಿಸಿ ಜಖಂಗೊಳಿಸಿರುವುದು ತನಿಖೆ ವೇಳೆ ಕಂಡುಬಂದಿದೆ. ಇದೊಂದು ಪಕ್ಕಾ ಪ್ಲಾನ್ ಮರ್ಡರ್ ಎಂದು ಪೊಲೀಸರು ಬಲವಾಗಿ ಶಂಕೆ ವ್ಯಕ್ತಪಡಿಸುತ್ತಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ತಮ್ಮ ನಿವಾಸದ ಬಳಿಯ ಕಚೇರಿ ಮುಂದೆ ರೇಖಾ ಕದಿರೇಶ್ ಅವರು ಅನ್ನದಾನ ಮಾಡುತ್ತಿದ್ದರು. ಏಕಾಏಕಿ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ, ಅಲ್ಲಿಂದ ಪರಾರಿಯಾಗಿದ್ದಾರೆ. ಗಾಯಗೊಂಡಿದ್ದ ಮಾಜಿ ಕಾರ್ಪೊರೇಟರ್ನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ತೀವ್ರ ರಕ್ತಸ್ರಾವದಿಂದಾಗಿ ಸಾವನ್ನಪ್ಪಿದ್ದಾರೆ. ಕಚೇರಿ ಬಳಿಯ 7 ಸಿಸಿಟಿವಿ ಕ್ಯಾಮರಾಗಳನ್ನು ಮೇಲಕ್ಕೆ ತಿರುಗಿಸಿ ಹತ್ಯೆ ನಡೆಸಲಾಗಿದ್ದು, ಇದೊಂದು ಪೂರ್ವ ನಿಯೋಜಿತ ಕೊಲೆ ಎಂದು ಹೇಳಾಗುತ್ತಿದೆ.
ಓದಿ-ರೇಖಾ ಕದಿರೇಶ್ Murder Case: ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿ ತನಿಖೆ ಚುರುಕು
ಮನೆಗೆ ಹೊಂದಿಕೊಂಡಂತಿರುವ ತಮ್ಮ ಕಚೇರಿ ಬಳಿ ಆಹಾರ ಪೊಟ್ಟಣ ಹಂಚುವಾಗ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಕುತ್ತಿಗೆ ಹಾಗೂ ತಲೆಗೆ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದ ರೇಖಾರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತು ಎಂದು ಕಾಟನ್ ಪೇಟೆ ಪೊಲೀಸರಿಗೆ ತಿಳಿಸಿದ್ದರು.