ಕರ್ನಾಟಕ

karnataka

ETV Bharat / city

ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನಕ್ಕೆ ಹೆಚ್​ಡಿಡಿ, ಹೆಚ್​ಡಿಕೆ, ಸಿದ್ದರಾಮಯ್ಯ ಸಂತಾಪ - Former minister Amarnath Shetty death news

ಮಾಜಿ ಸಚಿವ ಹಾಗೂ ಜೆಡಿಎಸ್ ಪಕ್ಷದ ಹಿರಿಯ ನಾಯಕ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಮರನಾಥ ಶೆಟ್ಟಿ ಅವರು ನಮ್ಮನ್ನು ಅಗಲಿದ ವಿಚಾರ ಕೇಳಿ ತೀವ್ರ ದುಃಖವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಂಬನಿ ಮಿಡಿದಿದ್ದಾರೆ.

ಹೆಚ್​ಡಿಡಿ, ಹೆಚ್​ಡಿಕೆ, ಸಿದ್ದರಾಮಯ್ಯ
ಹೆಚ್​ಡಿಡಿ, ಹೆಚ್​ಡಿಕೆ, ಸಿದ್ದರಾಮಯ್ಯ

By

Published : Jan 27, 2020, 11:03 AM IST

ಬೆಂಗಳೂರು: ಮಾಜಿ ಸಚಿವ ಹಾಗೂ ಜೆಡಿಎಸ್ ಪಕ್ಷದ ಹಿರಿಯ ನಾಯಕ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಮರನಾಥ ಶೆಟ್ಟಿ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಮಾಜಿ ಸಚಿವ ಹಾಗೂ ಜೆಡಿಎಸ್ ಪಕ್ಷದ ಹಿರಿಯ ನಾಯಕ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಮರನಾಥ ಶೆಟ್ಟಿ ಅವರು ನಮ್ಮನ್ನು ಅಗಲಿದ ವಿಚಾರ ಕೇಳಿ ತೀವ್ರ ದುಃಖವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಸಂತಾಪ ಸೂಚಿಸಿದ್ದು, ಮಾಜಿ ಸಚಿವರು ಹಾಗೂ ಮೃದು ಮನಸ್ಸಿನ ಸರಳ ರಾಜಕಾರಣಿಯಾಗಿರುವ ನಮ್ಮ ಪಕ್ಷದ ಹಿರಿಯ ಮುಖಂಡರಾದ ಅಮರನಾಥ ಶೆಟ್ಟಿಯವರು ವಿಧಿವಶರಾಗಿರುವುದು ತೀವ್ರ ದುಃಖ ತಂದಿದೆ. ಅವರ ನಿಧನದಿಂದ ನಾವು ಸಜ್ಜನರೊಬ್ಬರನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ‌ ನೀಡಲಿ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.

ಸಿದ್ದರಾಮಯ್ಯ ಕೂಡ ಸಂತಾಪ ವ್ಯಕ್ತಪಡಿಸಿದ್ದು, ಜನತಾ ದಳದ ಹಿರಿಯ ನಾಯಕ, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಜನತಾ ದಳದಲ್ಲಿ ನನ್ನ ಸಹೋದ್ಯೋಗಿಯಾಗಿದ್ದ ಶೆಟ್ಟರು, ಸರಳ-ಸಜ್ಜನಿಕೆಯ ಸ್ವಭಾವದಿಂದ ಕೂಡಿದ್ದರು. ಇವರ ಸಾವಿನ ಶೋಕದಲ್ಲಿರುವ ಕುಟುಂಬ ವರ್ಗದ ಜೊತೆ ನಾನೂ ಭಾಗಿಯಾಗಿದ್ದೇನೆ ಎಂದು ನಿಧನರಾದ ಸ್ನೇಹಿತ ಕೆ.ಅಮರನಾಥ ಶೆಟ್ಟಿ ಅವರ ಜೊತೆಗಿದ್ದ ಪೋಟೋವೊಂದನ್ನು ಶೇರ್​ ಮಾಡಿದ್ದಾರೆ.

ABOUT THE AUTHOR

...view details