ನವದೆಹಲಿ :ಹಿಜಾಬ್ ವಿಚಾರವನ್ನು ರಾಜಕೀಯ ಪಕ್ಷಗಳು ಮುಂದಿನ ವಿಧಾನಸಭಾ ಚುನಾವಣೆಗಾಗಿ ಬಳಸಿಕೊಳ್ಳುತ್ತಿದ್ದು, ಹಿಜಾಬ್ ಗಲಾಟೆಯಿಂದ ಲಾಭ ಪಡೆದುಕೊಳ್ಳಲು ಮುಂದಾಗಿವೆ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಿಜಾಬ್ ವಿಚಾರದ ಮೂಲಕ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ರಾಜಕೀಯ ಪಕ್ಷಗಳು 2023ರ ಚುನಾವಣೆಗೆ ಈ ಸಮಸ್ಯೆಯನ್ನು ಬಳಸಿಕೊಳ್ಳುತ್ತಿವೆ. ರಾಜ್ಯ ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಬಹುದು ಎಂದು ಎಎನ್ಐಗೆ ದೇವೇಗೌಡರು ಸಲಹೆ ನೀಡಿದ್ದಾರೆ.