ಬೆಂಗಳೂರು: ‘ನಾನು ಆತ್ಮಹತ್ಯೆಗೆ ಯತ್ನಿಸಿಲ್ಲ. ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವದಂತಿ ಹಬ್ಬಿದೆ. ಅದನ್ನು ನಂಬಬೇಡಿ’ ಎಂದು ರಿಯಲ್ ಎಸ್ಟೇಟ್ ಉದ್ಯಮಿ ಆರ್. ಪ್ರಭಾಕರ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
‘ಸಾಯಿ ಡೆವಲಪರ್ಸ್‌ನ ಮಾಲೀಕರೂ ಆಗಿರುವ ಪ್ರಭಾಕರ ರೆಡ್ಡಿ ರಾಜರಾಜೇಶ್ವರಿ ನಗರದ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ವೈಯಕ್ತಿಕ ಕಾರಣದಿಂದ ಆತ್ಮಹತ್ಯೆಗೆ ಮುಂದಾಗಿದ್ದರು’ ಎಂಬ ಸುದ್ದಿ ಹರಿದಾಡಿತ್ತು.