ಕರ್ನಾಟಕ

karnataka

ETV Bharat / city

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿದ ರಾಜ್ಯ ಸರ್ಕಾರ - ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಸುದ್ದಿ

ನೂತನವಾಗಿ ಸ್ಥಾಪಿಸಿರುವ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

b.s.paramashivaiah
ರಾಜ್ಯ ಸರ್ಕಾರ

By

Published : Nov 24, 2020, 5:38 PM IST

Updated : Nov 24, 2020, 6:04 PM IST

ಬೆಂಗಳೂರು:ನೂತನವಾಗಿ ಸ್ಥಾಪಿಸಿರುವ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಬಿ.ಎಸ್.ಪರಮಶಿವಯ್ಯರನ್ನು ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಆದೇಶ ಪ್ರತಿ

ಇತ್ತೀಚೆಗಷ್ಟೇ ಹೊಸದಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿ ಆದೇಶ ಹೊರಡಿಸಿದ್ದ ಸಿಎಂ ಯಡಿಯೂರಪ್ಪ ನಂತರ 500 ಕೋಟಿ ರೂ.ಗಳ ಅನುದಾನ ಮೀಸಲಿರಿಸುವಂತೆ ಆದೇಶಿಸಿದ್ದರು. ವ್ಯವಸ್ಥಾಪಕ ನಿರ್ದೇಶಕರ ನೇಮಕದವರೆಗೆ ಕಾರ್ಯ ನಿರ್ವಹಿಸಲು ಹಿಂದುಳಿದ ವರ್ಗಗಳ ಆಯುಕ್ತರಿಗೆ ಜವಾಬ್ದಾರಿ ವಹಿಸಿ ನಿನ್ನೆಯಷ್ಟೇ ಆದೇಶ ಹೊರಡಿಸಿದ್ದು ಇಂದು ಅಧ್ಯಕ್ಷರ ನೇಮಕ ಮಾಡಿ ಸಿಎಂ ಆದೇಶ ಹೊರಡಿಸಿದ್ದಾರೆ.

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ರೂ. ಕೋಟಿ ಅನುದಾನ

ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯನ್ನು ಕಟ್ಟಿ ಬೆಳೆಸಿರುವ ಪರಮಶಿವಯ್ಯ ಅಖಿಲ ಭಾರತ ವೀರಶೈವ ಮಹಾಸಭಾದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದು ಸಮಾಜದಲ್ಲಿ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ. ಸಮುದಾಯಕ್ಕೆ ಅವರು ನೀಡಿರುವ ಕೊಡುಗೆ ಪರಿಗಣಿಸಿ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಲಾಗುತ್ತಿದೆ.

Last Updated : Nov 24, 2020, 6:04 PM IST

ABOUT THE AUTHOR

...view details