ಕರ್ನಾಟಕ

karnataka

ETV Bharat / city

ರಾಜ್ಯಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ: ಸಿಎಂ, ರಾಜ್ಯಪಾಲರಿಂದ ಸ್ವಾಗತ - ಬೆಂಗಳೂರಿಗೆ ರಾಷ್ಟ್ರಪತಿ ಆಗಮನ

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಜ್ಯಪಾಲ ಹಾಗೂ ಸಿಎಂ ಆತ್ಮೀಯವಾಗಿ ಸ್ವಾಗತ ಕೋರಿದರು.

ರಾಜ್ಯಕ್ಕೆರಾಮನಾಥ್ ಕೋವಿಂದ್ ಆಗಮನ
ರಾಜ್ಯಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ

By

Published : Jun 13, 2022, 12:39 PM IST

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸದ ನಿಮಿತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸವಿತಾ ಕೋವಿಂದ್ ಅವರು ಇಂದು ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರಪತಿ ಕೋವಿಂದ್ ದಂಪತಿಯನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.


ಇಂದು ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಭಾಗಿಯಾಗಲಿದ್ದಾರೆ. ಹಾಗೆಯೇ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್‌) ನೂತನವಾಗಿ ರಾಜಾಧಿರಾಜ ‍ಶ್ರೀ ಗೋವಿಂದ ದೇವಾಲಯ ನಿರ್ಮಿಸಿದೆ. ಮಂಗಳವಾರ ನಡೆಯಲಿರುವ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗವಹಿಲಿದ್ದಾರೆ.

ರಾಷ್ಟ್ರಪತಿಗೆ ಸಿಎಂ ಸ್ವಾಗತ

(ಇದನ್ನೂ ಓದಿ: ಬರೋಬ್ಬರಿ 117 ಬಾರಿ ರಕ್ತದಾನ ಮಾಡಿ ಗಿನ್ನೆಸ್ ದಾಖಲೆ ಮಾಡಿದ ಮಹಿಳೆ)

ABOUT THE AUTHOR

...view details