ಬೆಂಗಳೂರು:2ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಮಹಿಳಾ ಪ್ರಥಮ ಪ್ರಜೆ ಸವಿತಾ ಕೋವಿಂದ್ ಅವರು ರಾಷ್ಟ್ರೀಯ ಮಿಲಿಟರಿ ಶಾಲೆಯ ಪ್ಲಾಟಿನಂ ಜ್ಯುಬಿಲಿ ಸಮಾರಂಭ ಹಾಗೂ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘದಿಂದ (ಇಸ್ಕಾನ್) ನೂತನವಾಗಿ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಇಂದು ಸಂಜೆ ಎಚ್ಎಎಲ್ ವಿಮಾನ ನಿಲ್ದಾಣದಿಂದ ಗೋವಾಕ್ಕೆ ಪ್ರಯಾಣ ಕೈಗೊಂಡರು.
ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಗಳನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.