ಕರ್ನಾಟಕ

karnataka

ETV Bharat / city

ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ನೇಮಕ - ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ನೇಮಕ

ವಿಧಾನಸಭೆಯ ಸ್ಥಾಯಿ ಸಮಿತಿಗಳಾದ ಅಂದಾಜು ಸಮಿತಿಗೆ ಅಭಯ್ ಪಾಟೀಲ್, ಸರ್ಕಾರಿ ಭರವಸೆಗಳ ಸಮಿತಿಗೆ ರಘುಪತಿ ಭಟ್, ಹಕ್ಕು ಭಾದ್ಯತಾ ಸಮಿತಿಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ನೇಮಕ ಮಾಡಲಾಗಿದೆ.

presidents appointedm for various  standing committees in karnataka legislature
ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ನೇಮಕ

By

Published : Dec 28, 2021, 4:14 AM IST

ಬೆಂಗಳೂರು: 2021-22ನೇ ಸಾಲಿನ ಕರ್ನಾಟಕ ವಿಧಾನ ಮಂಡಲದ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ರಮೇಶ್ ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಸಾರ್ವಜನಿಕ ಉದ್ಯಮಗಳ ಸಮಿತಿಗೆ ಜಿ.ಎಚ್. ತಿಪ್ಪಾರೆಡ್ಡಿ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಗೆ ಎಂ.ಪಿ. ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಮಿತಿಗೆ ಕುಮಾರ ಬಂಗಾರಪ್ಪ, ಅಧೀನ ಶಾಸನ ರಚನಾ ಸಮಿತಿಗೆ ಎಲ್.ಎ.ರವಿ ಸುಬ್ರಮಣ್ಯರನ್ನು ಅಧ್ಯಕ್ಷರಾಗಿ ನೇಮಿಸಲಾಗಿದೆ.

ಇನ್ನು ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿಗೆ ಸಾ.ರಾ.ಮಹೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಗೆ ಕೆ.ಪೂರ್ಣಿಮಾ, ಗ್ರಂಥಾಲಯ ಸಮಿತಿಗೆ ಡಾ.ವೈ.ಭತರ ಶೆಟ್ಟಿ, ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಮಿತಿಗೆ ಜಿ.ಸೋಮಶೇಖರ ರೆಡ್ಡಿರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಪ್ರತಿ ಸಮಿತಿಗೂ ವಿಧಾನಸಭೆಯಿಂದ 15 ಜನಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ಇರಲಿದ್ದಾರೆ.

ಇನ್ನು ವಿಧಾನಸಭೆಯ ಸ್ಥಾಯಿ ಸಮಿತಿಗಳಾದ ಅಂದಾಜು ಸಮಿತಿಗೆ ಅಭಯ್ ಪಾಟೀಲ್, ಸರ್ಕಾರಿ ಭರವಸೆಗಳ ಸಮಿತಿಗೆ ರಘುಪತಿ ಭಟ್, ಹಕ್ಕು ಭಾದ್ಯತಾ ಸಮಿತಿಗೆ ಬಸನಗೌಡ ಪಾಟೀಲ್ ಯತ್ನಾಳ್, ಖಾಸಗಿ ಸದಸ್ಯರುಗಳ ವಿಧೇಯಕ ಹಾಗೂ ನಿರ್ಣಯಗಳ ಸಮಿತಿ, ಅರ್ಜಿಗಳ ಸಮಿತಿ ಹಾಗೂ ವಸತಿ ಸಮಿತಿಗೆ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ:ಮಂಗಳೂರಿನಲ್ಲಿ ಸ್ಥಳೀಯಾಡಳಿತ ಚುನಾವಣೆ: ಮತ ಚಲಾಯಿಸಲು ಬಂದ ವಧು

ABOUT THE AUTHOR

...view details