ಬೆಂಗಳೂರು :ಕೊರೊನಾ ಸೋಂಕಿಗೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಎಂಟಿಸಿ ಕಂಡಕ್ಟರ್ ಕಂ ಡ್ರೈವರ್ ಮೃತಪಟ್ಟಿದ್ದಾರೆ. ಆದರೆ, ಕುಟುಂಬಕ್ಕೆ ಮೃತದೇಹ ಹಸ್ತಾಂತರಿಸಲು ಆಸ್ಪತ್ರೆ ಸಿಬ್ಬಂದಿ 1,20,000 ರೂ. ಹಣ ನೀಡುವಂತೆ ಒತ್ತಾಯಿಸಿದ್ದಾರೆ.
ಕೊರೊನಾಗೆ ಬಿಎಂಟಿಸಿ ಕಂಡಕ್ಟರ್ ಕಂ ಡ್ರೈವರ್ ಬಲಿ.. ಮೃತದೇಹ ನೀಡಲು ಖಾಸಗಿ ಆಸ್ಪತ್ರೆ ಮೀನಾಮೇಷ
ಹಣ ಕಟ್ಟುವವರೆಗೂ ಮೃತದೇಹ ಕೊಡುವುದಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ಮೃತ ವ್ಯಕ್ತಿಯ ಪತ್ನಿ ಮತ್ತು ಮಕ್ಕಳನ್ನು ಪರದಾಡುವಂತೆ ಮಾಡಿತ್ತು. ಈ ಸುದ್ದಿ ತಿಳಿದ ಬಿಬಿಎಂಪಿ ಅಧಿಕಾರಿಗಳು ಆಸ್ಪತ್ರೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು..
ಪೀಣ್ಯದ ಡಿಪೋ ನಂ-22 ರಲ್ಲಿ ಕೆಲಸ ಮಾಡುತ್ತಿದ್ದ 44 ವರ್ಷದ ಕಂಡಕ್ಟರ್ ಕಂ ಡ್ರೈವರ್, ಕಳೆದ ಹತ್ತು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಮೈಸೂರಿನ ಕೆಆರ್ ತಾಲೂಕಿನವರಾದ ಇವರನ್ನು ಚಿಕ್ಕಬಾಣವರದ ಎನ್‌ಆರ್‌ಆರ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಇವರ ಕೋವಿಡ್ ಟೆಸ್ಟ್ ವರದಿ ಪಾಸಿಟಿವ್ ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ತಡರಾತ್ರಿ ಸಾವನ್ನಪ್ಪಿದ್ದಾರೆ.
ಹಣ ಕಟ್ಟುವವರೆಗೂ ಮೃತದೇಹ ಕೊಡುವುದಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ಮೃತ ವ್ಯಕ್ತಿಯ ಪತ್ನಿ ಮತ್ತು ಮಕ್ಕಳನ್ನು ಪರದಾಡುವಂತೆ ಮಾಡಿದ್ದಾರೆ. ಆಸ್ಪತ್ರೆಯ ಮುಂದೆಯೇ ಪತ್ನಿ ಮತ್ತು ಮಕ್ಕಳು ಅಸಹಾಯಕರಾದ ಸುದ್ದಿ ತಿಳಿದ ಬಿಬಿಎಂಪಿ ಅಧಿಕಾರಿಗಳು ಆಸ್ಪತ್ರೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ಮೃತದೇಹ ನೀಡಲು ಸೂಚನೆ ನೀಡಿದರು.