ಕರ್ನಾಟಕ

karnataka

ಕೈಗಾರಿಕೋದ್ಯಮಿಗಳ ಅನುಕೂಲಕ್ಕಾಗಿ ಶೀಘ್ರ ಏಕಗವಾಕ್ಷಿ ವೆಬ್‌ಸೈಟ್ : ಸಚಿವ ಶೆಟ್ಟರ್‌

By

Published : Sep 12, 2020, 8:10 PM IST

ಈಸ್‌ ಆಫ್‌ ಡೂಯಿಂಗ್‌ ಬ್ಯೂಸಿನೆಸ್​​ನ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬಂಡವಾಳ ಹೂಡಿಕೆಗೆ ಸಮಸ್ಯೆಗಳಿಗೂ ಪರಿಹಾರ ನೀಡುವಂತಹ ವೆಬ್‌ಸೈಟ್‌ನ ರೂಪಿಸಲಾಗುತ್ತಿದೆ. ಈ ವೆಬ್​​ಸೈಟ್‌ನಲ್ಲಿ ಎಲ್ಲಾ ಪ್ರಶ್ನೆಗಳಿಗೆ ಉತ್ತರ ದೊರೆಯಲಿದೆ..

Program of Foreign Investors Council Karnataka Chapter
ಫಾರಿನ್‌ ಇನ್‌ವೆಸ್ಟರ್ಸ್‌ ಕೌನ್ಸಿಲ್‌ ಕರ್ನಾಟಕ ಚಾಪ್ಟರ್​​ನ ಕಾರ್ಯಕ್ರಮ

ಬೆಂಗಳೂರು :ಕೈಗಾರಿಕೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುವ ಏಕಗವಾಕ್ಷಿ ವೆಬ್‌ಸೈಟ್‌ನ ಸದ್ಯದಲ್ಲೇ ಪ್ರಾರಂಭಿಸಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್​​ನಲ್ಲಿ ಇಂದು ಎಫ್‌ಸಿಐ ವತಿಯಿಂದ ಆಯೋಜಿಸಲಾಗಿದ್ದ ಫಾರಿನ್‌ ಇನ್‌ವೆಸ್ಟರ್ಸ್‌ ಕೌನ್ಸಿಲ್‌ ಕರ್ನಾಟಕ ಚಾಪ್ಟರ್​​ನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ಕೈಗಾರಿಕೆಗಳ ಸ್ಥಾಪನೆ ಆಗಬೇಕು ಎನ್ನುವ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸಿದೆ ಎಂದರು.

ಅಲ್ಲದೆ ಉದ್ಯಮ ಸ್ನೇಹಿ ಉಪಕ್ರಮಗಳನ್ನು ಅನುಷ್ಠಾನಗೊಳಿಸುವತ್ತ ಹೆಚ್ಚಿನ ಗಮನ ಹರಿಸುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಹೊಸ ಕೈಗಾರಿಕಾ ನೀತಿ ಜಾರಿಗೊಳಿಸಲಾಗಿದೆ. ಹಾಗೂ ಕೈಗಾರಿಕಾ ಸೌಲಭ್ಯ ಅಧಿನಿಯಮದಲ್ಲಿ ಅಮೂಲಾಗ್ರ ಬದಲಾವಣೆ ಮಾಡಿರುವ ದೇಶದ ಮೊದಲ ರಾಜ್ಯ ಎನ್ನುವ ಹೆಗ್ಗಳಿಕೆ ನಮ್ಮದಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಏಕಗವಾಕ್ಷಿ ಯೋಜನೆಯ ಮೂಲಕ ಕೈಗಾರಿಕೆಗಳ ಸ್ಥಾಪನೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಅನೇಕ ನೀತಿ ರೂಪಿಸಲಾಗುತ್ತಿದೆ. ಅಲ್ಲದೆ, ಈಸ್‌ ಆಫ್‌ ಡೂಯಿಂಗ್‌ ಬ್ಯೂಸಿನೆಸ್​​ನ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬಂಡವಾಳ ಹೂಡಿಕೆಗೆ ಸಮಸ್ಯೆಗಳಿಗೂ ಪರಿಹಾರ ನೀಡುವಂತಹ ವೆಬ್‌ಸೈಟ್‌ನ ರೂಪಿಸಲಾಗುತ್ತಿದೆ. ಈ ವೆಬ್​​ಸೈಟ್‌ನಲ್ಲಿ ಎಲ್ಲಾ ಪ್ರಶ್ನೆಗಳಿಗೆ ಉತ್ತರ ದೊರೆಯಲಿದೆ. ಹಾಗೆಯೇ ಸಮಸ್ಯೆಗಳ ಪರಿಹಾರಕ್ಕೆ ವಿಳಂಬ ತೋರುವ ಅಧಿಕಾರಿಗಳಿಗೆ ರಿಮೈಂಡರ್‌ ನೀಡುವ ವ್ಯವಸ್ಥೆಯೂ ಇರಲಿದೆ ಎಂದು ಹೇಳಿದ್ದಾರೆ.

ರಾಜ್ಯವನ್ನು ಕೈಗಾರಿಕಾ ಸ್ನೇಹಿ ರಾಜ್ಯವನ್ನಾಗಿಸುವುದು ಹಾಗೂ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುವುದು ನಮ್ಮ ಮೂಲ ಉದ್ದೇಶ. ಈ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯು ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದಲ್ಲಿ ಹೂಡಿಕೆಗೆ ಪ್ರಶಸ್ತ ವಾತಾವರಣ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲೂ ಕೈಗಾರಿಕಾ ಸಂಘ-ಸಂಸ್ಥೆಗಳು ಹಾಗೂ ಬಂಡವಾಳ ಹೂಡಿಕೆಗೆ ಒಲವು ತೋರಿಸುವ ಕೈಗಾರಿಕೋದ್ಯಮಿಗಳ ಸಲಹೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಲಾಗುವುದು ಎಂದರು.

ABOUT THE AUTHOR

...view details