ಯಲಹಂಕ (ಬೆಂಗಳೂರು): ಶಾಸಕ ಎಸ್.ಆರ್.ವಿಶ್ವನಾಥ್ ಕೊಲೆಗೆ ಸಂಚು ನಡೆಸಿದ ಆರೋಪದಡಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಮತ್ತು ಕುಳ್ಳ ದೇವರಾಜ್ ವಿರುದ್ಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ ಬಳಿಕ, ಗೋಪಾಲಕೃಷ್ಣ ವಿರುದ್ಧ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಯಲಹಂಕದ ಎನ್ಇಎಸ್ ಸರ್ಕಲ್ ಮತ್ತು ರಾಜಾನುಕುಂಟೆ ಸರ್ಕಲ್ ಬಳಿ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಅವರ ಭಾವಚಿತ್ರಕ್ಕೆ ಬೆಂಕಿಯಿಟ್ಟು, ಕೊಲೆಗಡುಕ ಗೋಪಾಲಕೃಷ್ಣ ಎಂದು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.