ಕರ್ನಾಟಕ

karnataka

ETV Bharat / city

ಕನ್ನಡ ಬಾವುಟ ಸುಟ್ಟ ಎಂಇಎಸ್ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ!

ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಕಿ ಕನ್ನಡಿಗರ ಭಾವನೆಗೆ ಧಕ್ಕೆ ತಂದಿರುವ ಎಂಇಎಸ್‌ ಪುಂಡರ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆದಿದೆ.

protest against MES at bangalore
ಎಂಇಎಸ್ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ

By

Published : Dec 16, 2021, 11:00 PM IST

ಬೆಂಗಳೂರು: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಕನ್ನಡ ಭಾವುಟವನ್ನು ಸುಟ್ಟು ಹಾಕಿದ್ದನ್ನು ವಿರೋಧಿಸಿ ನಗರದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.

ಎಂಇಎಸ್ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ

ನಗರದ ಮೈಸೂರು ಬ್ಯಾಂಕ್ ಸರ್ಕಲ್​​ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಿ ಎಂಇಎಸ್ ವಿರುದ್ಧ ಘೋಷಣೆ ಕೂಗಿದರು. ಇದೇ ವೇಳೆ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರತಿಕೃತಿಯನ್ನು ದಹನ ಮಾಡಲಾಯಿತು. ರಾಜ್ಯದಲ್ಲಿ ಈ ಸಂಘಟನೆಗಳನ್ನು ನಿಷೇಧಿಸಬೇಕು. ಇಲ್ಲವಾದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಾಟಾಳ್ ನಾಗರಾಜ್​ ಆಕ್ರೋಶ:

ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನೆಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್ ಎಂ.ಇ.ಎಸ್ ಮತ್ತು ಶಿವಸೇನೆಗೆ ಛೀಮಾರಿ ಹಾಕಿ ಅವರೆಲ್ಲರನ್ನು ಬೆಳಗಾವಿಯಿಂದ ಗಡಿಪಾರು ಮಾಡುವಂತೆ ಆಕ್ರೋಶ ವ್ಯಕ್ತಪಡಿಸಿದರು.

ಧ್ವಜ ನಮ್ಮ ಹೆಮ್ಮೆಯ ಸಂಕೇತವಾಗಿರುತ್ತದೆ. ಅದಕ್ಕೆ ಬೆಂಕಿ ಹಚ್ಚುವ ಮೂಲಕ ಕಿಡಿಗೇಡಿ ಕೆಲಸ ಮಾಡಿರುವ ಮರಾಠಿ ಪುಂಡರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ:ಕನ್ನಡಿಗರ ಭಾವನೆಗೆ ಧಕ್ಕೆ ತಂದ ಎಂಇಎಸ್‌ ಪುಂಡರ ವಿರುದ್ಧ ಚಂದನವನದ ಕಿಡಿ

ABOUT THE AUTHOR

...view details