ಕರ್ನಾಟಕ

karnataka

ETV Bharat / city

ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ - ಎಪಿಎಂಸಿ ಕಾಯ್ದೆ ತಿದ್ದುಪಡಿ

ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ತಮಗೂ ಒಂದು ಅಭಿವೃದ್ಧಿ ಪ್ರಾಧಿಕಾರ ರಚಿಸುವಂತೆ ಒತ್ತಾಯಿಸಿ ರಾಜ್ಯ ಎಪಿಎಂಸಿ ಯಾರ್ಡ್‌ ಕಾರ್ಮಿಕರ ಒಕ್ಕೂಟದಿಂದ ಯಶವಂತಪುರ ಎಪಿಎಂಸಿ 4ನೇ ಗೇಟ್‌ನಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಯಿತು.

protest-against-the-amendment-of-the-apmc-act
ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

By

Published : Dec 21, 2020, 3:35 PM IST

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ತಮಗೂ ಒಂದು ಅಭಿವೃದ್ಧಿ ಪ್ರಾಧಿಕಾರ ರಚಿಸುವಂತೆ ಒತ್ತಾಯಿಸಿ ರಾಜ್ಯ ಎಪಿಎಂಸಿ ಯಾರ್ಡ್‌ ಕಾರ್ಮಿಕರ ಒಕ್ಕೂಟದಿಂದ ಪ್ರತಿಭಟಿಸಲಾಯಿತು.

ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

ಯಶವಂತಪುರ ಎಪಿಎಂಸಿ 4ನೇ ಗೇಟ್‌ನಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿವರೆಗೆ ಕಾಲ್ನಡಿಗೆ ಜಾಥಾ ನಡೆಸಿದ ಕೂಲಿ ಕಾರ್ಮಿಕರು, ಹಮಾಲಿಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಅರುಣ್‌ ಪರಮೇಶ್ವರ್‌, ಸರ್ಕಾರ ಕೂಡಲೇ ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನ ವಾಪಸ್ ಪಡೆದುಕೊಳ್ಳಬೇಕು‌‌. ಇಲ್ಲವಾದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ABOUT THE AUTHOR

...view details