ಕರ್ನಾಟಕ

karnataka

ETV Bharat / city

ಭ್ರಷ್ಟಾಚಾರದ ವಿರುದ್ಧ ಕೆಲಸ ಮಾಡುವ ಅಧಿಕಾರಿಗಳಿಗೆ ರಕ್ಷಣೆ ಕೊಡಿ: ಮೋಹನ್ ದಾಸರಿ - bidar chambola grama panchayat Corruption

ಗ್ರಾಮ ಪಂಚಾಯತಿಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡಲಿಲ್ಲ ಎನ್ನುವ ಕಾರಣಕ್ಕೆ ಪಿಡಿಒ ಮೇಲೆ ಹಲ್ಲೆ ಯತ್ನ ಸೇರಿದಂತೆ ಕೆಲಸ ಮಾಡಲು ಆಗದಂತಹ ವಾತಾವರಣ ನಿರ್ಮಿಸಿರುವುದನ್ನು ಆಮ್ ಆದ್ಮಿ ಪಕ್ಷ ಖಂಡಿಸುತ್ತದೆ. ಇಂತಹ ದಬ್ಬಾಳಿಕೆಯನ್ನು ಸಹಿಸುವುದಿಲ್ಲ ಹಾಗೂ ಶೀಘ್ರ ಈ ಸಮಸ್ಯೆಗೆ ಸರ್ಕಾರ ಪರಿಹಾರಕ್ಕೆ ನಿರ್ದೇಶನ ನೀಡಬೇಕು ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದರು.

Provide protection for officers who working against corruption
ಮೋಹನ್ ದಾಸರಿ

By

Published : Dec 19, 2020, 8:10 PM IST

ಬೆಂಗಳೂರು: ಬೀದರ್ ಜಿಲ್ಲೆಯ ಚಾಂಬೋಳಾ ಗ್ರಾಮದ ಪಿಡಿಒ ಮಂಗಳಾ ಕಾಂಬ್ಳೆ ಅವರಿಗೆ ಕಿರುಕುಳ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳದ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್ ಮತ್ತು ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಗ್ರಾಮ ಪಂಚಾಯತಿಗಳು ಸೇರಿದಂತೆ ಸ್ಥಳೀಯ ಸಂಸ್ಥೆಗಳು ಭ್ರಷ್ಟಾಚಾರದ ಕೂಪಗಳಾಗಿ ಮಾರ್ಪಟ್ಟಿವೆ. ಇಂತಹ ಭ್ರಷ್ಟಾಚಾರದ ವಿರುದ್ಧ ಮಾತನಾಡಿದ ಮಹಿಳೆ ಮೇಲೆ ಒತ್ತಡ ಹೇರಿ, ಜೀವ ಬೆದರಿಕೆ ಹಾಕುವಂತಹ ಹೀನ ಕೆಲಸಕ್ಕೆ ಜನಪ್ರತಿನಿಧಿಗಳು ಮುಂದಾಗಿದ್ದು, ಅದಕ್ಕೆ ಜಿಲ್ಲಾಡಳಿತ ಸೇರಿದಂತೆ ಎಲ್ಲರೂ ಕುಮ್ಮಕ್ಕು ಕೊಡುತ್ತಿದ್ದಾರೆ ಎಂದರೆ ನಾವು ಯಾವ ಕಾಲದಲ್ಲಿ ಇದ್ದೇವೆ ಎಂದು ಅನುಮಾನ ಕಾಡುತ್ತಿದೆ ಎಂದರು.

ಭ್ರಷ್ಟಾಚಾರದ ವಿರುದ್ಧ ಕೆಲಸ ಮಾಡುವ ಅಧಿಕಾರಿಗಳಿಗೆ ರಕ್ಷಣೆ ಒದಗಿಸಿ

ಗ್ರಾಮ ಪಂಚಾಯತಿಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡಲಿಲ್ಲ ಎನ್ನುವ ಕಾರಣಕ್ಕೆ ಪಿಡಿಒ ಮೇಲೆ ಹಲ್ಲೆ ಯತ್ನ ಸೇರಿದಂತೆ ಕೆಲಸ ಮಾಡಲು ಆಗದಂತಹ ವಾತಾವರಣ ನಿರ್ಮಿಸಿರುವುದನ್ನು ಆಮ್ ಆದ್ಮಿ ಪಕ್ಷ ಖಂಡಿಸುತ್ತದೆ. ಇಂತಹ ದಬ್ಬಾಳಿಕೆಯನ್ನು ಸಹಿಸುವುದಿಲ್ಲ ಹಾಗೂ ಶೀಘ್ರ ಈ ಸಮಸ್ಯೆ ಪರಿಹಾರಕ್ಕೆ ನಿರ್ದೇಶನ ನೀಡಬೇಕು ಆಗ್ರಹಿಸಿದರು.

ಇನ್ನು ಇದೇ ಸಂದರ್ಭದಲ್ಲಿ 'ಈಟಿವಿ ಭಾರತ'ದ ವರದಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ರಾಜ್ಯ ಆಮ್ ಆದ್ಮಿ ಪಕ್ಷ ಸಂತ್ರಸ್ತ ಪಿಡಿಒ ಮಂಗಳಾ ಕಾಂಬ್ಳೆ ಪರವಾಗಿ ನ್ಯಾಯ ಸಿಗುವವರೆಗೆ ನಿಲ್ಲುವುದಾಗಿ ಭರವಸೆ ನೀಡಿದರು.

ABOUT THE AUTHOR

...view details