ಬೆಂಗಳೂರು: ಕೋವಿಡ್ ಸಮಯದಲ್ಲಿ ಮಾಧ್ಯಮದವರು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಕೋವಿಡ್ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಸ್ಥರಿಗೂ ಪರಿಹಾರ ನೀಡಬೇಕು ಎಂದು ಶೃಂಗೇರಿ ಶಾಸಕ ರಾಜೇಗೌಡ ಆಗ್ರಹಿಸಿದ್ದಾರೆ.
ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಕೋವಿಡ್ ಸಮಯದಲ್ಲಿ ಎಷ್ಟು ಪತ್ರಕರ್ತರು ಮೃತಪಟ್ಟಿದ್ದಾರೆ ಎಂಬ ಅಂಕಿಅಂಶ ಕೊಡಬೇಕು. ಅವರನ್ನು ಕೊರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಿ, ಮೃತರ ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಬೇಕು. ಜೊತೆಗೆ ಪತ್ರಕರ್ತರಿಗೆ ಉಚಿತ ಕೋವಿಡ್ ವ್ಯಾಕ್ಸಿನ್ ನೀಡಬೇಕು ಎಂದರು.