ಕರ್ನಾಟಕ

karnataka

ETV Bharat / city

ತನಿಖೆ ಸಂಪೂರ್ಣ ಆಗುವವರೆಗೆ ಯಾವುದೇ ನಿರ್ಧಾರ ಇಲ್ಲ : ಮುಖ್ಯಮಂತ್ರಿ ಬೊಮ್ಮಾಯಿ

ಪಿಎಸ್​ಐ ಅಕ್ರಮ ಹಿನ್ನೆಲೆಯಲ್ಲಿ ಮರು ಪರೀಕ್ಷೆ ಆದೇಶವನ್ನು ಹಿಂಪಡೆಯಬೇಕು ಮತ್ತು ಅಕ್ರಮದಲ್ಲಿ ಭಾಗಿ ಆಗದ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸ್ಥಳಕ್ಕೆ ಸಿಎಂ ಭೇಟಿ ನೀಡಿದರು..

Chief Minister Basavaraja Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By

Published : May 28, 2022, 3:33 PM IST

ಬೆಂಗಳೂರು :ಪಿಎಸ್​ಐ ಪರೀಕ್ಷೆಯಲ್ಲಿ ಅಕ್ರಮ ಆದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ಮಾಡುವುದಾಗಿ ಈ ಹಿಂದೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಮರು ಪರೀಕ್ಷೆ ಆದೇಶವನ್ನು ಹಿಂಪಡೆಯಬೇಕು ಮತ್ತು ಅಕ್ರಮದಲ್ಲಿ ಭಾಗಿ ಆಗದ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟಿಸಲಾಯಿತು. ಪ್ರತಿಭಟನೆಯಲ್ಲಿ 300ಕ್ಕೂ ಹೆಚ್ಚು ಅಭ್ಯರ್ಥಿಗಳು ಮತ್ತು ಪೋಷಕರು ಇದ್ದರು.

ಮುಖ್ಯಮಂತ್ರಿ ಭೇಟಿ :ಪ್ರತಿಭಟನೆ ನಡೆಯುತ್ತಿದ್ದ ಫ್ರೀಡಂ ಪಾರ್ಕ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಪಿಎಸ್ಐ ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಯಲಿದೆ. ಯಾರೆಲ್ಲಾ ಭಾಗಿಯಾಗಿದ್ದಾರೆ ಎಲ್ಲರಿಗೂ ಶಿಕ್ಷೆ ಖಂಡಿತವಾಗಿಯೂ ಆಗುತ್ತದೆ. ತನಿಖೆ ಆಗುವವರೆಗೂ ಕೂಡ ಪಿಎಸ್​ಐ ಅಭ್ಯರ್ಥಿಗಳು ಸಮಾಧಾನವಾಗಿ ಇರಿ. ನಾವು ಈಗ ಯಾವುದೇ ಭರವಸೆ ಕೊಡಲು ಸಾಧ್ಯ ಇಲ್ಲ. ತನಿಖೆ ಮುಗಿಯೋವರೆಗೂ ಕೂಡ ಭರವಸೆ ಕೊಡಲ್ಲ. ಮನವಿ ಪತ್ರವನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡುತ್ತೇನೆ ಎಂದರು.

ಸಂಘಟನೆಗಳಿಂದ ಬೆಂಬಲ : ಫ್ರೀಡಂ ಪಾರ್ಕ್​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕೆಲ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಇಂದಿನ ಪ್ರತಿಭಟನೆಗೆ ಸಮತಾ ಸೈನಿಕ ದಳ, ದಲಿತಪರ ಸಂಘಟನೆಗಳು, ರೈತಪರ ಸಂಘಟನೆಗಳು, ಮಹಿಳಾ ಪರ ಸಂಘಟನೆಳು ಅಭ್ಯರ್ಥಿಗಳಿಗೆ ಸಾಥ್​ ನೀಡಿದರು.

ಇದನ್ನೂ ಓದಿ:ಗ್ಯಾಸ್ ಸಿಲಿಂಡರ್ ಸ್ಫೋಟ, ನಾಲ್ವರ ಸಾವು

ABOUT THE AUTHOR

...view details