ಬೆಂಗಳೂರು :ಪಿಎಸ್ಐ ಪರೀಕ್ಷಾ ಅಕ್ರಮದಿಂದಾಗಿ ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಜೀವನಕ್ಕೆ ಮಂಕು ಕವಿದಿದೆ. ಅಕ್ರಮ ನಡೆದಿರುವುದು ರುಜುವಾತು ಆಗುತ್ತಿದ್ದಂತೆ ಮರುಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾಸಿದೆ. ಮತ್ತೊಂದೆಡೆ ನ್ಯಾಯಯುತವಾಗಿ ಪರೀಕ್ಷೆ ಬರೆದು ನೇಮಕವಾಗಿದ್ದ ಅಭ್ಯರ್ಥಿಗಳು ಮನನೊಂದ ಪ್ರಧಾನಿ ನರೇಂದ್ರ ಮೋದಿಗೆ ರಕ್ತದಲ್ಲಿ ಪತ್ರ ಬರೆದ್ದಾರೆ.
ಪಿಎಸ್ಐ ಪರೀಕ್ಷೆಯಲ್ಲಿ ಆಯ್ಕೆಯಲ್ಲಿ ಮೋಸ ಹೋದವರಿಗೆ ನ್ಯಾಯ ಸಿಗಬೇಕು. ಅನ್ಯಾಯ ಮಾಡಿದವರನ್ನು ಜೈಲಿಗೆ ಹಾಕಬೇಕು. ಅಲ್ಲದೇ 2021ರಲ್ಲಿ ನಡೆದ ಎಫ್ಡಿಎ ಪರೀಕ್ಷೆಯಲ್ಲಿ ಅಕ್ರಮವಾಗಿದೆ. ಅದನ್ನು ಕೂಡ ತನಿಖೆ ಮಾಡಿ ನ್ಯಾಯ ಕೊಡಿಸಬೇಕು. ಪ್ರಧಾನಿ ಮೋದಿ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಅಕ್ರಮದ ಬಗ್ಗೆ ತನಿಖೆ ಮಾಡಿಸಿ ನ್ಯಾಯ ಕೊಡಿಸುತ್ತಾರೆ ಎಂಬ ನಂಬಿಕೆಯಿದೆ.