ಕರ್ನಾಟಕ

karnataka

ETV Bharat / city

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆಯಲು ಸಿಐಡಿ ಸಿದ್ಧತೆ - ಸಿಐಡಿ

PSI Recruitment scam: ಅಧಿಕಾರಿಗಳ ತನಿಖೆ ಚುರುಕುಗೊಂಡಿದ್ದು, ಪ್ರಮುಖ 8 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ.

CID
ಸಿಐಡಿ

By

Published : Aug 9, 2022, 11:03 AM IST

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ 8 ಮಂದಿ ಆರೋಪಿಗಳನ್ನ ವಶಕ್ಕೆ ಪಡೆಯಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ‌. ಪ್ರಕರಣದ ಕಿಂಗ್ ಪಿನ್ ಎನಿಸಿಕೊಂಡಿರುವ ಆರ್.ಡಿ.ಪಾಟೀಲ್​​ಗೆ ಹಣ ನೀಡಿ ಒಪ್ಪಂದ ಮಾಡಿಕೊಂಡಿದ್ದ ಆರೋಪದಡಿ ಶರಣ ಬಸವೇಶ್ವರ ಆರ್ಟ್ಸ್, ಸೈನ್ಸ್, ಕಾಮರ್ಸ್ ಕಾಲೇಜು ಹಾಗೂ ಎಂ.ಎಸ್ ಇರಾನಿ ಕಾಲೇಜಿನಲ್ಲಿ ಪರೀಕ್ಷೆ ಎದುರಿಸಿದ್ದ ಅಭ್ಯರ್ಥಿಗಳಾದ ಕಲ್ಲಪ್ಪ, ಸಿದ್ದುಗೌಡ, ಈರಪ್ಪ, ಸೋಮನಾಥ, ರವಿರಾಜ, ಶ್ರೀಶೈಲ, ಭಗವಂತ್ ರಾಯ್ ನ‌ನ್ನ ವಶಕ್ಕೆ ಪಡೆಯಲು ಸಿಐಡಿ ಸಿದ್ಧತೆ ನಡೆಸಿದೆ.

ಆರೋಪಿಗಳ ಪೈಕಿ ಸಿದ್ಧುಗೌಡ - ಆರ್.ಡಿ ಪಾಟೀಲ್ ಸಂಬಂಧಿ ಹಾಗೂ ಹೆಲ್ತ್ ಡಿಪಾರ್ಟ್‌ಮೆಂಟ್​​ನಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಕಲ್ಲಪ್ಪ- ಪೊಲೀಸ್ ಕಾನ್ಸ್​​ಟೇಬಲ್​​, ಸೋಮನಾಥ- ವ್ಯವಸಾಯ ಮಾಡಿಕೊಂಡಿದ್ದ. ಇನ್ನು ವಿಜಯ್ ಕುಮಾರ್ - ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ರವಿರಾಜ- ಮೊದಲ ರ‍್ಯಾಂಕ್ ಪಡೆದಿರುವ ಆರೋಪಿ. ಶ್ರೀಶೈಲ- ಪದವೀಧರನಾಗಿದ್ದು, ಪಿಎಸ್ಐ ಹುದ್ದೆಗಾಗಿ ಡೀಲ್ ಮಾಡಿದ್ದ ಆರೋಪವಿದೆ.

ಭಗವಂತರಾಯ್ - ಬೆಂಗಳೂರಿನಲ್ಲಿ ಐಟಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರೆ, ಈರಪ್ಪ- ಅಡುಗೆ ಭಟ್ಟನಾಗಿ ಕೆಲಸ ಮಾಡಿಕೊಂಡಿದ್ದ. ಈ 8 ಮಂದಿ ಅಭ್ಯರ್ಥಿಗಳಿಂದ ಒಟ್ಟು 6 ಕೋಟಿ ಹಣವನ್ನ ಆರ್.ಡಿ.ಪಾಟೀಲ್ ಸಂಗ್ರಹಿಸಿ ಎಲ್ಲರಿಗೂ ಬ್ಲ್ಯೂಟೂತ್ ಡಿವೈಸ್ ನೀಡಿರುವುದು ತನಿಖೆ ವೇಳೆ ಬಯಲಾಗಿದೆ.

ಇದನ್ನೂ ಓದಿ:ಪಿಎಸ್ಐ ನೇಮಕ ಅಕ್ರಮ: ಬಂಧಿತ ಅಮೃತ್ ಪಾಲ್ ಆಪ್ತರ ಮನೆಗಳ ಮೇಲೆ ಸಿಐಡಿ ದಾಳಿ!

ABOUT THE AUTHOR

...view details