ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.
ಕೊರೊನಾ ಆತಂಕ: ಸಿದ್ದರಾಮಯ್ಯ ನಿವಾಸಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಬೆಂಗಳೂರಿನ ಶಿವಾನಂದ ವೃತ್ತದ ಸಮೀಪವಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಸಾರ್ವಜನಿಕರ ಭೇಟಿ ಹಾಗೂ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಕೊರೊನಾ ಆತಂಕ..ಸಿದ್ದರಾಮಯ್ಯ ನಿವಾಸಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ
ಕೊರೊನಾ ವೈರಸ್ ಹಿನ್ನೆಲೆ ಸಾರ್ವಜನಿಕರ ಭೇಟಿ ಹಾಗೂ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ಶಿವಾನಂದ ವೃತ್ತದ ಸಮೀಪವಿರುವ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಗೇಟಿಗೆ ಬೋರ್ಡ್ ಅಳವಡಿಸಲಾಗಿದೆ.
ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅಲ್ಲದೆ ನಿನ್ನೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ನಗರದಲ್ಲಿ ಓಡಾಡಿರುವ ಶಂಕೆಯಿದೆ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.