ಕರ್ನಾಟಕ

karnataka

ETV Bharat / city

ನೂರು ಅಥವಾ ಹೆಚ್ಚು ಜನ ಸೇರುವಲ್ಲಿ ಸಿಸಿಟಿವಿ ಕಡ್ಡಾಯ: ಪೊಲೀಸ್ ಆಯುಕ್ತ ಕಮಲ್ ಪಂಥ್

ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸುವ ಅಗತ್ಯವಿದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂಥ್ ಟ್ವೀಟ್ ಮಾಡಿದ್ದಾರೆ.

ಪೊಲೀಸ್ ಆಯುಕ್ತ ಕಮಲ್ ಪಂಥ್
ಪೊಲೀಸ್ ಆಯುಕ್ತ ಕಮಲ್ ಪಂಥ್

By

Published : Feb 19, 2021, 12:37 AM IST


ಬೆಂಗಳೂರು:ಕರ್ನಾಟಕ, ಸಾರ್ವಜನಿಕ ಸುರಕ್ಷತಾ ಕಾಯ್ದೆ-2017 ರ ಅಡಿಯಲ್ಲಿ ನೂರು ಅಥವಾ ಅದಕ್ಕಿಂತ ಹೆಚ್ಚಿನ ಜನರು ಒಂದೇ ಸಮಯದಲ್ಲಿ ಸಾರ್ವಜನಿಕ ಸಭೆ ನಡೆಸುವ ಪ್ರತಿ ಸ್ಥಳದಲ್ಲಿ ಕ್ಲೋಸ್ಡ್-ಸರ್ಕ್ಯೂಟ್ ಟೆಲಿವಿಷನ್ (ಸಿಸಿಟಿವಿ) ಕಣ್ಗಾವಲು ವ್ಯವಸ್ಥೆಯನ್ನು ಅಳವಡಿಸುವ ಅಗತ್ಯವಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಟ್ವೀಟ್ ಮೂಲಕ ಹೇಳಿದ್ದಾರೆ.

ಕಾಯ್ದೆ ಪ್ರಕಾರ, ಕಾಲಕಾಲಕ್ಕೆ ಸಭೆ ನೆಡೆಯುವ ಸ್ಥಳಗಳನ್ನು ಪರೀಕ್ಷಿಸಲು ಆಯಾ ವ್ಯಾಪ್ತಿಯ ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ ಅಧಿಕಾರವಿರುತ್ತದೆ. ಆದ್ದರಿಂದ, ಅಂತಹ ಎಲ್ಲ ಸಂಸ್ಥೆಗಳಿಗೆ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಸಿಸಿಟಿವಿ ಕ್ಯಾಮರಾಗಳನ್ನು ತ್ವರಿತವಾಗಿ ಅಳವಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details