ಕರ್ನಾಟಕ

karnataka

By

Published : Oct 30, 2019, 8:49 PM IST

ETV Bharat / city

ಟಿಪ್ಪು ಜಯಂತಿ ರದ್ಧತಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌‌: ವಿಚಾರಣೆ ಮುಂದೂಡಿದ ಹೈಕೋರ್ಟ್​​

ಟಿಪ್ಪು ಜಯಂತಿ ರದ್ಧತಿ ವಿರುದ್ದ ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್ ಸಲಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌‌ಗೆ ಆಕ್ಷೇಪಣೆ ಸಲ್ಲಿಸಲು ಅಡ್ವೋಕೇಟ್ ಜನರಲ್​ಗೆ ಸೂಚನೆ ನೀಡಲಾಗಿದೆ.

ಟಿಪ್ಪು ಜಯಂತಿ ರದ್ದತಿ ವಿರುದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌‌

ಬೆಂಗಳೂರು: ಟಿಪ್ಪು ಜಯಂತಿಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌‌ ಸಲ್ಲಿಸಿತ್ತು. ಈ ವಿಚಾರವಾಗಿ ಆಕ್ಷೇಪಣೆ ಸಲ್ಲಿಸಲು ಅಡ್ವೋಕೇಟ್ ಜನರಲ್​ಗೆ ಸೂಚನೆ ನೀಡಲಾಗಿದೆ.

ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು‌ ಸರ್ಕಾರ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಹೈಕೋರ್ಟ್ ಮುಂದೂಡಿದೆ.

ಸದ್ಯ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಟಿಪ್ಪು ವಿಚಾರವಾಗಿ ತುಂಬಾ ಚರ್ಚೆಗಳಾಗಿತ್ತು. ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಟಿಪ್ಪು ಸುಲ್ತಾನ್ ಜಯಂತಿ ಮಾಡಿದಾಗಲೂ ಬಿಜೆಪಿ ಮತ್ತು ಸಂಘ ಪರಿವಾರದ ಸಂಸ್ಥೆಗಳು ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಈಗ ಜಯಂತಿ ಆಚರಣೆ ರದ್ದು ಮಾಡಿರುವ ಸರ್ಕಾರ, ಪಠ್ಯಪುಸ್ತಕದಲ್ಲಿ ಇರುವ ಟಿಪ್ಪು ಇತಿಹಾಸ ಅಧ್ಯಾಯವನ್ನು ಕೈಬಿಡಲು ಮುಂದಾಗಿದೆ.

ABOUT THE AUTHOR

...view details