ಕರ್ನಾಟಕ

karnataka

ETV Bharat / city

ಜೂನ್ 3ನೇ ವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಚಿವ ಬಿ.ಸಿ.ನಾಗೇಶ್ - ಪರೀಕ್ಷೆ ಫಲಿತಾಂಶ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜೂನ್ ತಿಂಗಳ ಮೂರನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಬಿ.ಸಿ.ನಾಗೇಶ್
ಬಿ.ಸಿ.ನಾಗೇಶ್

By

Published : May 20, 2022, 10:10 AM IST

ಬೆಂಗಳೂರು: ನಿನ್ನೆಯಷ್ಟೇ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬೆನ್ನಲ್ಲೇ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ದ್ವಿತೀಯ ಪಿಯುಸಿ ಫಲಿತಾಂಶವನ್ನು ಜೂನ್ 3ನೇ ವಾರದಲ್ಲಿ ಪ್ರಕಟಿಸುವುದಾಗಿ ತಿಳಿಸಿದರು.

ಈ ಬಾರಿ ಪಿಯುಸಿ ಪರೀಕ್ಷೆಯನ್ನು ಒಟ್ಟು 6,84,255 ವಿದ್ಯಾರ್ಥಿಗಳು ಎದುರಿಸಿದ್ದಾರೆ.‌ ಇದರಲ್ಲಿ ಬಾಲಕರು-3,46,936, ಬಾಲಕಿಯರು-3,37,319 ಇದ್ದರೆ, ಒಟ್ಟಾರೆ ರೆಗ್ಯುಲರ್ ವಿದ್ಯಾರ್ಥಿಗಳು-6,00,519, ಪುನರಾವರ್ತಿತ ವಿದ್ಯಾರ್ಥಿಗಳು- 61,808, ಖಾಸಗಿ ವಿದ್ಯಾರ್ಥಿಗಳು - 21,928 ಜನ ಪರೀಕ್ಷೆ ಬರೆದಿದ್ದಾರೆ.

ವಿಭಾಗವಾರು ಮಾಹಿತಿ:

  • ಕಲಾ ವಿಭಾಗ - 2,28,167
  • ವಾಣಿಜ್ಯ ವಿಭಾಗ - 2,45,519
  • ವಿಜ್ಞಾನ ವಿಭಾಗ - 2,10,569 ಜನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಎಕ್ಸಾಂ ಬರೆದಿದ್ದಾರೆ.

ABOUT THE AUTHOR

...view details