ಕರ್ನಾಟಕ

karnataka

By

Published : May 23, 2021, 3:36 PM IST

ETV Bharat / city

'ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಪರೀಕ್ಷೆಗಳನ್ನು ನಡೆಸಬೇಕಾದ್ದು ಅನಿವಾರ್ಯ'

ಪ್ರಸ್ತುತ ಕೋವಿಡ್ ಎಲ್ಲೆಡೆ ತೀವ್ರವಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಎರಡನೇ ಅಲೆ ತಹಬದಿಗೆ ಬಂದ ಕೂಡಲೇ 15-20 ದಿನಗಳ ಕಾಲಾವಕಾಶ ನೀಡಿ ಮುಂಚೆಯೇ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ. ಕೋವಿಡ್ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಸಹ ಕರ್ನಾಟಕ ಸರ್ಕಾರ ಯೋಜಿಸಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

 PUC exams should be conducted in the interests of the students: suresh kumar
PUC exams should be conducted in the interests of the students: suresh kumar

ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸುವುದು ಉಚಿತ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯು ಆಯೋಜಿಸಿದ್ದ ಎಲ್ಲ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾಡಿದ ಸಚಿವರು, ವೃತ್ತಿಪರ ಶಿಕ್ಷಣಕ್ಕೆ ಸನ್ನದ್ಧರಾಗುವ ಹಂತದಲ್ಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಾದ್ದು ಅನಿವಾರ್ಯ. ಕೋವಿಡ್ ಸಂಪೂರ್ಣವಾಗಿ ತಹಬಂದಿಗೆ ಬಂದ ನಂತರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿಯಾದರೂ ಪರೀಕ್ಷೆಗಳನ್ನು ನಡೆಸುವುದು ಸಮರ್ಪಕವಾಗುತ್ತದೆ ಎಂದು ಪ್ರತಿಪಾದಿಸಿದರು.

ಪ್ರಸ್ತುತ ಕೋವಿಡ್ ಎಲ್ಲೆಡೆ ತೀವ್ರವಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಎರಡನೇ ಅಲೆ ತಹಬದಿಗೆ ಬಂದ ಕೂಡಲೇ 15-20 ದಿನಗಳ ಕಾಲಾವಕಾಶ ನೀಡಿ ಮುಂಚೆಯೇ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ. ಕೋವಿಡ್ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಸಹ ಕರ್ನಾಟಕ ಸರ್ಕಾರವು ಯೋಜಿಸಿದೆ ಎಂದರು.

ಪರೀಕ್ಷಾ ಪ್ರಕ್ರಿಯೆ ಸರಳೀಕರಣಗೊಳ್ಳಬೇಕೆಂದು ಹಲವರ ಪ್ರತಿಪಾದನೆಯಾಗಿದೆ. ಸರಳೀಕೃತ ಮಾದರಿಯಲ್ಲಿ ಇಡೀ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಲು 45 ದಿನಗಳ ಕಾಲಾವಕಾಶ ಅಗತ್ಯವಿದೆ. ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯೂ ಕಡಿಮೆ ಅವಧಿಯ ಪರೀಕ್ಷೆಗಳನ್ನು ನಡೆಸುವ ಯೋಜನೆಯನ್ನು ಸಲಹಾತ್ಮಕವಾಗಿ ಹೇಳಿದೆ. ಕರ್ನಾಟಕ ರಾಜ್ಯವು ಕಳೆದ ಸಾಲಿನಲ್ಲಿ ಕೋವಿಡ್ ಸಂದರ್ಭದಲ್ಲಿಯೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಿದ ಅನುಭವ ಹೊಂದಿದೆ. ಈ ಅನುಭವದ ಹಿನ್ನೆಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಗಳನ್ನು ಸಮರ್ಥವಾಗಿ ಆಯೋಜಿಸುವುದು ಹೆಚ್ಚಿನ ಸಮಸ್ಯೆಯಾಗದಿದ್ದರೂ, ವಿದ್ಯಾರ್ಥಿಗಳ ಕಲಿಕೆ, ಪೋಷಕರ ಮನಃಸ್ಥಿತಿ, ಕೇಂದ್ರ ಸರ್ಕಾರದ ಸಲಹೆಗಳು ಹಾಗೂ ಪ್ರಸ್ತುತ ಪೂರ್ವ ಸಿದ್ಧತಾ ಕಾರ್ಯಗಳನ್ನು ಸಮಗ್ರವಾಗಿ ಅವಲೋಕಿಸಲಾಗುತ್ತೆ ಎಂದರು.

ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವ ಕಾರ್ಯ ಪೂರ್ಣ:

ದ್ವಿತೀಯ ಪಿಯು ಪರೀಕ್ಷೆಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದೆ. ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಜುಲೈ ತಿಂಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾದಲ್ಲಿ ಆಗಸ್ಟ್​​ನಲ್ಲಿ ಪರೀಕ್ಷಾ ಫಲಿತಾಂಶವನ್ನು ಘೋಷಿಸಲು ಸಾಧ್ಯವಾಗುತ್ತದೆ. ಹಾಗಾಗಿ ನೀಟ್/ಜೆಇಇ/ಸಿಇಟಿ/ಐಸಿಎಆರ್​ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಗಸ್ಟ್ ನಲ್ಲಿ ಸೂಕ್ತ ದಿನಾಂಕಗಳಂದು ಆಯೋಜಿಸಬಹುದಾಗಿದೆ ಎಂದೂ ಸಚಿವ ಸುರೇಶ್ ಕುಮಾರ್ ಸಲಹೆ ನೀಡಿದರು.

ABOUT THE AUTHOR

...view details