ಕರ್ನಾಟಕ

karnataka

ETV Bharat / city

ಪುನೀತ್ ಅಭಿಮಾನಿಗಳಿಗೆ ಅನ್ನಸಂತರ್ಪಣೆ.. ಅರಮನೆ ಮೈದಾನದಲ್ಲಿ ಸಕಲ ಸಿದ್ಧತೆ - ನಟ ಪುನೀತ್​ ರಾಜಕುಮಾರ್ ನಿಧನ ಸುದ್ದಿ

ಇಂದು ಪುನೀತ್​ ಅಭಿಮಾನಿಗಳಿಗೆ ಬೆಂಗಳೂರು ನಗರದ ತ್ರಿಪುರವಾಸಿನಿ ಮೈದಾನದಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 25 ಸಾವಿರಕ್ಕೂ ಅಧಿಕ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಮತ್ತು ಗಣ್ಯರ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ.

puneeth-rajkumar-anna-santharpane-special-parking-lot
ಪುನೀತ್ ಅನ್ನಸಂತರ್ಪಣೆ

By

Published : Nov 9, 2021, 7:17 AM IST

ಬೆಂಗಳೂರು:ನಟ ಪುನೀತ್​ ರಾಜ್​ಕುಮಾರ್​ ಅಗಲಿಕೆ ಹಿನ್ನೆಲೆ ನಗರದ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಇಂದು ಅನ್ನಸಂತರ್ಪಣೆ ಕಾರ್ಯ ನಡೆಯಲಿದೆ. 25 ಸಾವಿರಕ್ಕೂ ಅಧಿಕ ಅಭಿಮಾನಿಗಳು ಆಗಮಿಸುವ ನಿರೀಕ್ಷೆ ಇದ್ದು, 1 ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಜೊತೆಗೆ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಪಾರ್ಕಿಂಗ್ ವ್ಯವಸ್ಥೆ ಮಾದರಿ

ಇಂದು ಪುನೀತ್​ ರಾಜಕುಮಾರ್ ಅವರ ಆಸೆಯಂತೆ, ಅಭಿಮಾನಿಗಳಿಗೆ ತ್ರಿಪುರವಾಸಿನಿ (ಗೇಟ್-2)ರಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಕ್ಕೆ ಬರುವ ಸಂಖ್ಯೆ ಅಧಿಕವಾಗಿದ್ದು, ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ.

ಗೇಟ್ ನಂ.1 ಕೃಷ್ಣ ವಿಹಾರದಲ್ಲಿ ಸಾರ್ವಜನಿಕರಿಗೆ ವಾಹನ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಗೇಟ್ ನಂ.4 ಗಾಯತ್ರಿ ವಿಹಾರದಲ್ಲಿ ವಿಐಪಿ ವಾಹನಗಳ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿದೆ. ಗೇಟ್ ನಂ.2ರಲ್ಲಿ ಅನ್ನ ಸಂತರ್ಪಣೆ ಕಾರ್ಯ ನಡೆಯಲಿದೆ.

ಬಿಗಿ ಪೊಲೀಸ್ ಭದ್ರತೆ:ಅರಮನೆ ಮೈದಾನದ ಸುತ್ತ ಪೊಲೀಸರ ಬಿಗಿ ಬಂದೋಬಸ್ತ್ ವಹಿಸಲಾಗಿದ್ದು, ಭದ್ರತೆಗೆ 1000 ಪೊಲೀಸರನ್ನು ನಿಯೋಜಿಸಲಾಗಿದೆ. ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ನೇತೃತ್ವದಲ್ಲಿ ಮೂವರು ಎಸಿಪಿ, 32 ಪೊಲೀಸ್ ಇನ್‌ಸ್ಪೆಕ್ಟರ್, 70 ಪಿಎಸ್‌ಐ, 6 ಕೆಎಸ್‌ಆರ್‌ಪಿ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

ABOUT THE AUTHOR

...view details