ಬೆಂಗಳೂರು :ನಗರದಕಂಠೀರವ ಸ್ಟುಡಿಯೋದಲ್ಲಿ ತಂದೆ-ತಾಯಿಯ ಸಮಾಧಿ ಪಕ್ಕದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.
ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಚಿತ್ರರಂಗದ ನಾಯಕನಟ ಪುನೀತ್ ರಾಜ್‌ಕುಮಾರ್ ಅವರ ಅಂತ್ಯ ಸಂಸ್ಕಾರವನ್ನು ಕಂಠೀರವ ಸ್ಟುಡಿಯೋ ಆವರಣದಲ್ಲಿ ಸರ್ಕಾರದ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.