ಬೆಂಗಳೂರು: ನಿನ್ನೆ ಹೃದಯಾಘಾತದಿಂದ ಪುನೀತ್ ರಾಜಕುಮಾರ್ ಇಹಲೋಕ ತ್ಯಜಿಸಿರುವ ಹಿನ್ನೆಲೆಯಲ್ಲಿ ಅವರ ಪುತ್ರಿ ಧೃತಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಧೃತಿ ಅವರು ನೇರವಾಗಿ ಸದಾಶಿವನಗರದ ತಮ್ಮ ನಿವಾಸಕ್ಕೆ ಆಗಮಿಸಿದ್ದು, ಕಂಠೀರವ ಕ್ರೀಡಾಂಗಣಕ್ಕೆ ಕರೆ ತರಲಾಗುತ್ತಿದೆ.
ಪುನೀತ್ ರಾಜ್‌ಕುಮಾರ್ ಪುತ್ರಿ ಧೃತಿ ಬೆಂಗಳೂರು ಏರ್ಪೋರ್ಟ್ಗೆ ಆಗಮನ; ಕೆಲವೇ ಕ್ಷಣಗಳಲ್ಲಿ ಕಂಠೀರವ ಸ್ಟೇಡಿಯಂಗೆ - ಪುನೀತ್ ರಾಜ್‌ಕುಮಾರ್
ಪುನೀತ್ ರಾಜ್‌ಕುಮಾರ್ ಅವರ ಪುತ್ರಿ ಧೃತಿ ಅಮೆರಿಕದಿಂದ ದೆಹಲಿಗೆ ಬಂದು ಬಳಿಕ ಅಲ್ಲಿಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ನಿಲ್ದಾಣದಿಂದ ಸದಾಶಿವನಗರದ ನಿವಾಸ ತಲುಪಿರುವ ಧೃತಿ ಕೆಲವೇ ನಿಮಿಷಗಳಲ್ಲಿ ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿ ತಂದೆ ಪುನೀತ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲಿದ್ದಾರೆ.
ಪುನೀತ್ ರಾಜ್‌ಕುಮಾರ್ ಪುತ್ರಿ ಧೃತಿ ಬೆಂಗಳೂರು ಏರ್ಫೋಟ್‌ಗೆ ಆಗಮನ; ಕೆಲವೇ ನಿಮಿಷಗಳಲ್ಲಿ ಕಂಠೀರವ ಸ್ಟೇಡಿಯಂಗೆ
ವಿದ್ಯಾಭ್ಯಾಸಕ್ಕಾಗಿ ಪುನೀತ್ ಅವರ ಹಿರಿಯ ಪುತ್ರಿ ಧೃತಿ ಅಮೆರಿಕಕ್ಕೆ ತೆರಳಿದ್ದರು. ತಂದೆಯ ಸಾವಿನ ಸುದ್ದಿ ಬಳಿಕ ಅವರು ನಿನ್ನೆಯೇ ಅಮೆರಿಕದಿಂದ ಹೊರಟು ಇಂದು ಮಧ್ಯಾಹ್ನ ದೆಹಲಿಗೆ ಆಗಮಿಸಿ ಅಲ್ಲಿಂದ ಬೆಂಗಳೂರಿಗೆ ವಿಮಾನದ ಮೂಲಕ ಆಗಮಿಸಿದ್ದಾರೆ.
Last Updated : Oct 30, 2021, 5:30 PM IST