ಬೆಂಗಳೂರು:ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ರು.
ರಾಜ್ಯಕ್ಕೆ ಮಹಾರಾಷ್ಟ್ರದಿಂದ ಬಂದವರಿಗೆ ಮಾತ್ರ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ - institutional quarantine
ಇನ್ಮುಂದೆ ಮಹಾರಾಷ್ಟ್ರದಿಂದ ಬಂದವರಿಗೆ ಮಾತ್ರ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗಿರಲಿದೆ ಎಂದು ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ. ದೆಹಲಿ, ಚೆನ್ನೈನಿಂದ ಬಂದವರನ್ನು ಇನ್ಮುಂದೆ ಹೋಂ ಕ್ವಾರಂಟೈನ್ನಲ್ಲಿ ಇರಿಸಲು ತೀರ್ಮಾನಿಸಲಾಗಿದೆ ಎಂದರು.
![ರಾಜ್ಯಕ್ಕೆ ಮಹಾರಾಷ್ಟ್ರದಿಂದ ಬಂದವರಿಗೆ ಮಾತ್ರ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ people](https://etvbharatimages.akamaized.net/etvbharat/prod-images/768-512-7765933-thumbnail-3x2-ashokkk.jpg)
ಲಾಕ್‌ಡೌನ್ ಮಾಡುವಂತೆ ಶ್ರೀಮಂತ ವರ್ಗ ಬೇಡಿಕೆ ಇಟ್ಟಿದೆ. ಕೂಲಿ ಕಾರ್ಮಿಕರು ಲಾಕ್‌ಡೌನ್ ಬೇಡ ಎಂದಿದ್ದಾರೆ. ನಾವು ಎಲ್ಲರ ಅಭಿಪ್ರಾಯ ಪಡೆದು ತೀರ್ಮಾನ ಮಾಡಬೇಕಾಗುತ್ತದೆ. 85% ಜನ ಲಾಕ್‌ಡೌನ್ ಬೇಡ ಎಂದಿದ್ದಾರೆ. ಹೀಗಾಗಿ ಬಡವರ ಪರ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡರು.
ಮಹಾರಾಷ್ಟ್ರದಿಂದ ಬಂದವರಿಗೆ ಮಾತ್ರ ಸಾಂಸ್ಥಿಕ ಕ್ವಾರಂಟೈನ್:
ಇನ್ಮುಂದೆ ಮಹಾರಾಷ್ಟ್ರದಿಂದ ಬಂದವರಿಗೆ ಮಾತ್ರ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗಿರಲಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.
ಈ ಮುಂಚೆ ಮಹಾರಾಷ್ಟ್ರ, ದೆಹಲಿ, ಚೆನ್ನೈನಿಂದ ಬರುವವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತಿತ್ತು. ಇನ್ಮುಂದೆ ಮಹಾರಾಷ್ಟ್ರದಿಂದ ಬಂದವರಿಗೆ ಮಾತ್ರ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತದೆ. ದೆಹಲಿ, ಚೆನ್ನೈನಿಂದ ಬಂದವರನ್ನು ಹೋಂ ಕ್ವಾರಂಟೈನ್ನಲ್ಲಿ ಇರಿಸಲು ತೀರ್ಮಾನಿಸಲಾಗಿದೆ ಎಂದರು.