ಬೆಂಗಳೂರು: ನಾನು ಡಿಸಿಎಂ ಆಗುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಆರ್.ಅಶೋಕ್ ತಿಳಿಸಿದರು. ಕೆ.ಕೆ.ಗೆಸ್ಟ್ ಹೌಸ್ನಲ್ಲಿ ಮಾತನಾಡಿದ ಅವರು, ನನಗೆ ಡಿಸಿಎಂ ಸ್ಥಾನ ನೀಡುವ ಕುರಿತು ಮಾಹಿತಿ ಇಲ್ಲ. ಈ ಬಗ್ಗೆ ಯಾವುದೇ ಚರ್ಚೆ ಕೂಡ ನಡೆದಿಲ್ಲ ಎಂದು ತಿಳಿಸಿದರು.
ನಾನು ಡಿಸಿಎಂ ಆಗುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ: ಆರ್.ಅಶೋಕ್ - R ashok reaction about DCM post
ನನಗೆ ಡಿಸಿಎಂ ಸ್ಥಾನ ನೀಡುವ ಕುರಿತು ಮಾಹಿತಿ ಇಲ್ಲ. ಈ ಬಗ್ಗೆ ಯಾವುದೇ ಚರ್ಚೆ ಕೂಡ ನಡೆದಿಲ್ಲ. ಸಚಿವ ಸಂಪುಟ ರಚನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ ಎಂದು ಆರ್.ಅಶೋಕ್ ತಿಳಿಸಿದರು.
ಆರ್.ಅಶೋಕ್
ಸಚಿವ ಸಂಪುಟ ರಚನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಆ ಬಳಿಕ ಸಂಪುಟ ರಚನೆಯಾಗಲಿದೆ. ಬಹುಶಃ ಒಂದು ವಾರದಲ್ಲೇ ಈ ಎಲ್ಲ ಬೆಳವಣಿಗೆಗಳು ಆಗಬಹುದು ಎಂದು ತಿಳಿಸಿದರು.
ಇನ್ನು ಹಿರಿಯರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಈ ರೀತಿಯ ಯಾವುದೇ ನಿಯಮಗಳಿಲ್ಲ. ಹಿರಿತನವನ್ನು ನೋಡಿ ಸಚಿವ ಸ್ಥಾನ ನೀಡಲಿದ್ದಾರೆ ಎಂದರು.