ಬೆಂಗಳೂರು :ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲ ಪಶು ಆಸ್ಪತ್ರೆಗಳಲ್ಲಿ ಉಚಿತವಾಗಿ ನಾಯಿಗಳಿಗೆ ಲಸಿಕೆ ನೀಡಲಾಗುವುದು ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಸೆ.28ರಿಂದ 3 ದಿನ ರೇಬೀಸ್ ರೋಗಕ್ಕೆ ಉಚಿತ ಲಸಿಕೆ : ಸಚಿವ ಪ್ರಭು ಚೌಹಾಣ್ - Minister prabhu chauhan
ಮನೆಯಲ್ಲಿನ ಮುದ್ದು ಪ್ರಾಣಿಗಳು ಎಂದು ಪರಿಗಣಿಸ್ಪಡುವ ನಾಯಿಗಳ ಆರೋಗ್ಯದ ದೃಷ್ಟಿಯಿಂದ ನಿಮ್ಮ ಹತ್ತಿರದ ಪಶು ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿ ಲಸಿಕೆ ಹಾಕಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಪಶು ವೈದ್ಯಾಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಎಂದು ಸಚಿವ ಪ್ರಭು ಚೌಹಾಣ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ..
ಜಾಗತಿಕವಾಗಿ ರೇಬೀಸ್ ರೋಗದ ನಿರ್ಮೂಲನೆಗಾಗಿ ಮತ್ತು ಜಾಗೃತಿ ಮೂಡಿಸಲು ಪ್ರತಿ ವರ್ಷ ಸೆ.28ರಂದು ವಿಶ್ವ ರೇಬೀಸ್ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕರಿಗೆ ರೇಬೀಸ್ ರೋಗದ ಕುರಿತು ಅರಿವು ಮೂಡಿಸುವ ಹಾಗೂ ಉಚಿತ ಲಸಿಕೆ ಹಾಕುವ ಕಾರ್ಯಕ್ರಮ ರಾಜ್ಯಾದ್ಯಂತ 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಚೌಹಾಣ್ ಹೇಳಿದ್ದಾರೆ.
ಬೀದರ್ ಜಿಲ್ಲೆಯ ಪಾಲಿಕ್ಲಿನಿಕ್ನಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಿದ್ದೇನೆ. ಸೆ. 28ರಿಂದ 30ರವರೆಗೆ 3 ದಿನಗಳ ಕಾಲ ಉಚಿತ ಲಸಿಕೆ ನೀಡಲಾಗುತ್ತದೆ. ಮನೆಯಲ್ಲಿನ ಮುದ್ದು ಪ್ರಾಣಿಗಳು ಎಂದು ಪರಿಗಣಿಸ್ಪಡುವ ನಾಯಿಗಳ ಆರೋಗ್ಯದ ದೃಷ್ಟಿಯಿಂದ ನಿಮ್ಮ ಹತ್ತಿರದ ಪಶು ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿ ಲಸಿಕೆ ಹಾಕಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಪಶು ವೈದ್ಯಾಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಎಂದು ಸಚಿವ ಪ್ರಭು ಚೌಹಾಣ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.