ಬೆಂಗಳೂರು:ಕೇರಳದ ವಯನಾಡಿನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕಚೇರಿ ಧ್ವಂಸಗೊಳಿಸಿರುವ ಎಸ್ಎಫ್ಐ ಕಾರ್ಯಕರ್ತರ ಕ್ರಮವನ್ನು ರಾಜ್ಯ ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹಾಗೂ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಕೇರಳದ ವಯನಾಡಿನಲ್ಲಿರುವ ಕಚೇರಿಯನ್ನು ಎಸ್ಎಫ್ಐ ಕಾರ್ಯಕರ್ತರು ನಿನ್ನೆ ಧ್ವಂಸಗೊಳಿಸಿದ್ದರು. ಗುಡ್ಡಗಾಡು ಪ್ರದೇಶಗಳಲ್ಲಿ ಅರಣ್ಯದ ಸುತ್ತ ಬಫರ್ ವಲಯಗಳನ್ನು ರಚಿಸುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ ನಡೆಸುತ್ತಿತ್ತು. ಈ ಹೋರಾಟದ ಭಾಗವಾಗಿ ಎಸ್ಎಫ್ಐ ಕಾರ್ಯಕರ್ತರು ರಾಹುಲ್ ಗಾಂಧಿ ಕಚೇರಿಯನ್ನು ಧ್ವಂಸಗೊಳಿಸಿದ್ದರು.
ಕಠಿಣ ಕ್ರಮಕ್ಕೆ ಆಗ್ರಹ:ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ. ಶಿವಕುಮಾರ್, ಎಸ್ಎಫ್ಐ ಕಾರ್ಯಕರ್ತರಿಂದ ನಡೆದ ಧ್ವಂಸ, ಪ್ರಜಾಪ್ರಭುತ್ವದ ಆಶಯಗಳ ಮೇಲಿನ ದಾಳಿ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.