ಬೆಂಗಳೂರು :ರಾಹುಲ್ ಗಾಂಧಿ ಹುಟ್ಟುಹಬ್ಬದ ಪ್ರಯುಕ್ತ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್ ವತಿಯಿಂದ ನಡೆದ ಬಡವರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ದೇಶಾದ್ಯಂತ ಕಾಂಗ್ರೆಸ್ ಪಕ್ಷವು ಜನರ ಹಿತಾಸಕ್ತಿಯನ್ನು ಮುಂದಿಟ್ಟುಕೊಂಡು ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ಮೂಲಕ ರಾಹುಲ್ ಗಾಂಧಿ ಈ ದೇಶದ ಮುಂದಿನ ಪ್ರಧಾನಿಯಾಗುವುದು ಖಚಿತ ಎಂದು ಹೇಳಿದರು.
ಕೋವಿಡ್ ಸಂಕಷ್ಟದ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಜನಸಾಮಾನ್ಯರಿಗೆ ನೆರವಾಗುವಲ್ಲಿ ವಿಫಲವಾಗಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಾ, ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರೊಂದಿಗೆ ಜನರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ ಎಂದರು.