ಕರ್ನಾಟಕ

karnataka

ETV Bharat / city

ನವೆಂಬರ್‌16 ರವರೆಗೂ ಜೋರು ಮಳೆ: ಬೆಂಗಳೂರಿಗೆ ಆರೆಂಜ್ ಅಲರ್ಟ್‌ ಘೋಷಣೆ - ಆರೆಂಜ್ ಅಲರ್ಟ್‌

ಭಾರಿ ಮಳೆ ಹಿನ್ನೆಲೆಯಲ್ಲಿ ನವೆಂಬರ್ 16 ರವರೆಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಹವಾಮಾನ ಇಲಾಖೆ (Meteorological Department) ಆರೆಂಜ್ ಅಲರ್ಟ್‌ (Orange alert) ಘೋಷಿಸಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

By

Published : Nov 14, 2021, 11:20 AM IST

Updated : Nov 14, 2021, 12:19 PM IST

ಬೆಂಗಳೂರು:ರಾಜಧಾನಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ಭಾರಿ ಮಳೆ (Heavy rain alert to Bengaluru) ಹಿನ್ನೆಲೆಯಲ್ಲಿ ನ.16 ರವರೆಗೂ ಆರೆಂಜ್ ಅಲರ್ಟ್‌ (Orange alert) ಘೋಷಿಸಲಾಗಿದೆ.

ನಗರದ ಹೆಬ್ಬಾಳ, ಮಲ್ಲೇಶ್ವರಂ, ಮೆಜೆಸ್ಟಿಕ್, ಜಯನಗರ, ಕೆ.ಆರ್.ಮಾರ್ಕೆಟ್, ಕತ್ರಿಗುಪ್ಪೆ, ಬಿಟಿಎಂ ಲೇಔಟ್, ಕೋರಮಂಗಲ, ಇಂದಿರಾ ನಗರದಲ್ಲಿ ಧಾರಾಕಾರ ಮಳೆ ಸುರಿದಿದೆ. ಇದರಿಂದ ನಗರದ ತಗ್ಗು ರಸ್ತೆಗಳು, ಅಂಡರ್ ಪಾಸ್​​​ಗಳಲ್ಲಿ ನೀರು ನಿಂತಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ (Low-Pressure area) ಹಿನ್ನೆಲೆಯಲ್ಲಿ ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಪರಿಣಾಮ, ಬೆಂಗಳೂರಿನಲ್ಲಿ ಜಡಿಮಳೆಯ ಮುನ್ಸೂಚನೆಯ‌ನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ:ಮಳೆ ಸಾಧ್ಯತೆ : ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಯೆಲ್ಲೋ ಅಲರ್ಟ್​ ಘೋಷಣೆ

ಕರಾವಳಿ, ದ.ಒಳನಾಡಿನಲ್ಲಿಇನ್ನೆರೆಡು ದಿನ ಭಾರಿ ಮಳೆ:

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ. ರಾಜಧಾನಿಯಲ್ಲಿ ಶೀತ ವಾತಾವರಣ, ಮಳೆ ಮುಂದುವರೆಯಲಿದೆ. ಅಕ್ಕಪಕ್ಕದ ರಾಜ್ಯಗಳಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ತಾಪಮಾನ ಕುಸಿದಿದ್ದು ಶೀತ ವಾತಾವರಣವಿದೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲಾವಾರು ಹವಾಮಾನ ವರದಿ ಹೀಗಿದೆ..

  • ಹವಾಮಾನ ವೈಪರೀತ್ಯದಿಂದಾಗಿ ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಭಾರಿ ಕುಸಿತ.
  • ಬೆಂಗಳೂರು, ಬೀದರ್, ಚಿತ್ರದುರ್ಗ ಜಿಲ್ಲೆಗಳಲ್ಲಿ ಕಡಿಮೆ ತಾಪಮಾನ ದಾಖಲು.
  • ಶನಿವಾರ ತಡರಾತ್ರಿಯಿಂದ ಬೆಂಗಳೂರು ನಗರದ ವಿವಿಧ ಬಡಾವಣೆಗಳಲ್ಲಿ ತುಂತುರು ಮಳೆ.
  • ಮೈಸೂರು, ರಾಮನಗರ, ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ನ.16ರ ವರೆಗೆ ಆರೆಂಜ್​​ ಅಲರ್ಟ್ ಘೋಷಣೆ ಮಾಡಲಾಗಿದೆ.
  • ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ತುಂತುರು ಮಳೆ, ಶೀತ ವಾತಾವರಣ ಮುಂದುವರೆಯಲಿದೆ.
  • ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ.
  • ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯ ಸಾಧ್ಯತೆ ಕಡಿಮೆ ಇದೆ. ಆದರೆ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ನವೆಂಬರ್ 16ರ ಬಳಿಕ ವಿವಿಧ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.

Last Updated : Nov 14, 2021, 12:19 PM IST

ABOUT THE AUTHOR

...view details