ಬೆಂಗಳೂರು: ಬಂಗಾಳಕೊಲ್ಲಿಯ ಅಸನಿ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಇನ್ನೂ ಮೂರು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸೋಮವಾರ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಮಾರ್ಚ್ 22ರಿಂದ 24ರ ವರೆಗೆ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಾರ್ಚ್ 23ರಂದು ಭಾರಿ ಮಳೆಯಾಗಲಿದೆ ಎಂದು ಹೇಳಿದೆ.