ಬೆಂಗಳೂರು: ತೌಕ್ತೆ ಚಂಡಮಾರುತದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯ ಕೆಲವೆಡೆ ಮೋಡ ಮುಸುಕಿದ ವಾತಾವರಣದ ಜೊತೆಗೆ ಗುಡುಗು ಸಹಿತ ಮಳೆ ಸುರಿಯುತ್ತಿದೆ.
ತೌಕ್ತೆ ಎಫೆಕ್ಟ್: ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಮಳೆ - ತೌಕ್ತೆ ಚಂಡಮಾರುತ
ಬೆಂಗಳೂರಿನ ಹಲವೆಡೆ ಬೆಳಗ್ಗೆಯಿಂದಲೂ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಎರಡು ದಿನಗಳ ಕಾಲ ನಗರದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಜನರು ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ.
ತೌಕ್ತೆ ಎಫೆಕ್ಟ್: ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಮಳೆ
ತೌಕ್ತೆ ಎಫೆಕ್ಟ್: ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಮಳೆ
ಬೆಳಗ್ಗೆ ಸುಮಾರು 10 ಗಂಟೆಯಿಂದ ನಗರದ ಆರ್.ಆರ್.ನಗರ, ಬಿಟಿಎಂ ಲೇಔಟ್, ರಾಜಾಜಿನಗರ, ಮಲ್ಲೇಶ್ವರ, ಬಸವನಗುಡಿ, ಕೆ.ಆರ್.ಮಾರ್ಕೆಟ್, ಕಾರ್ಪೊರೇಷನ್ ವೃತ್ತ, ಲಾಲ್‌ಬಾಗ್, ಶಾಂತಿನಗರ ಯಶವಂತಪುರದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಎರಡು ದಿನಗಳ ಕಾಲ ನಗರದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಜನರು ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.