ಕರ್ನಾಟಕ

karnataka

ಜೂನ್ 27 ರವರೆಗೆ ಕರಾವಳಿಯಲ್ಲಿ ಮಳೆ : ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್

By

Published : Jun 23, 2021, 10:54 PM IST

ರಾಜ್ಯಾದ್ಯಂತ ಜೂನ್ 27ರ ಬಳಿಕ ಮಳೆಯ ವಿಂಗಡಣೆ ಹಾಗೂ ತೀವ್ರತೆ ಗಣನೀಯವಾಗಿ ಕ್ಷೀಣಿಸುವ ಹೆಚ್ಚಿನ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ..

rain-on-the-karnataka-coastal-
ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್

ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಿದ್ದಾನೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಮಳೆಯಾಗಿದೆ. ಮುಖ್ಯವಾಗಿ ಚಾಮರಾಜನಗರದ ಕೊಳ್ಳೇಗಾಲದಲ್ಲಿ 3 ಸೆಂ.ಮೀ, ದಕ್ಷಿಣ ಕನ್ನಡದ ಮೂಡಬಿದ್ರೆಯಲ್ಲಿ 2 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್

ಓದಿ: CC Center ನಲ್ಲಿ ಸೋಂಕಿತ ಮಕ್ಕಳ ಹುಟ್ಟುಹಬ್ಬ, ಹೊಲಕ್ಕೆ ತೆರಳಿ ಉಳುಮೆ...ಇದು ರೇಣುಕಾಚಾರ್ಯ ಹೊಸ ಅವತಾರ!

ಪೂರ್ವ ಅರಬ್ಬೀ ಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶ ಇದೆ. ಈ ಪರಿಣಾಮದಿಂದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 27ರವರೆಗೆ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜೂನ್ 27ರವರೆಗೆ ಕೆಲವು ಸ್ಥಳಗಳಲ್ಲಿ ಮಾತ್ರ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ಜೂನ್ 27ರ ಬಳಿಕ ಮಳೆಯ ವಿಂಗಡಣೆ ಹಾಗೂ ತೀವ್ರತೆ ಗಣನೀಯವಾಗಿ ಕ್ಷೀಣಿಸುವ ಹೆಚ್ಚಿನ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details