ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ.
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ - ಬೆಂಗಳೂರು ಮಳೆ ನ್ಯೂಸ್
ನಿವಾರ್ ಚಂಡಮಾರುತದ ಪರಿಣಾಮ ಬೆಂಗಳೂರು ನಗರದ ಹಲವೆಡೆ ಈಗಾಗಲೇ ಗಾಳಿ ಸಹಿತ ಮಳೆಯಾಗುತ್ತಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಮುಂಜಾನೆಯಿಂದ ಮಳೆ
ಮುಂದಿನ ಮೂರು ಗಂಟೆಯಲ್ಲಿ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಮುಂಜಾನೆಯಿಂದ ಮಳೆ
ಇನ್ನು ನಗರದ ಹಲವೆಡೆ ಈಗಾಗಲೇ ಗಾಳಿ ಸಹಿತ ಮಳೆಯಾಗುತ್ತಿದ್ದು, ಕೆಲಸಕ್ಕೆ ತೆರಳುವವರಿಗೆ ಅಡ್ಡಿ ಉಂಟುಮಾಡಿದೆ. ನಿವಾರ್ ಚಂಡಮಾರುತದ ಪರಿಣಾಮದಿಂದ ಇಂದು ಮತ್ತು ನಾಳೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದ್ದು, ನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Last Updated : Nov 26, 2020, 10:53 AM IST