ಕರ್ನಾಟಕ

karnataka

ETV Bharat / city

ನಾಮಪತ್ರ ವಾಪಸ್ ಪಡೆಯಲು ನಾಳೆ ಕೊನೆ ದಿನ, ನಾಲ್ವರು ಅಭ್ಯರ್ಥಿಗಳ ಅವಿರೋಧ ಆಯ್ಕೆ ಘೋಷಣೆ? - ಪಕ್ಷೇತರ ಅಭ್ಯರ್ಥಿ ಸಂಗಮೇಶ್ ಚಿಕ್ಕನರಗುಂದ ನಾಮಪತ್ರ ತಿರಸ್ಕೃತ

ಪಕ್ಷೇತರ ಅಭ್ಯರ್ಥಿ ಸಂಗಮೇಶ್ ಚಿಕ್ಕನರಗುಂದ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಕಣದಲ್ಲಿರುವ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆಯನ್ನು ಅಧಿಕೃತವಾಗಿ ಘೋಷಣೆ ಮಾಡುವುದು ಮಾತ್ರ ಬಾಕಿ ಇದೆ.

rajya sabha Tomorrow last day to get the nomination back
ನಾಮಪತ್ರ ವಾಪಸ್ ಪಡೆಯಲು ನಾಳೆ ಕೊನೆ ದಿನ, ನಾಲ್ವರು ಅಭ್ಯರ್ಥಿಗಳ ಅವಿರೋಧ ಆಯ್ಕೆ ಘೋಷಣೆ?

By

Published : Jun 11, 2020, 11:36 PM IST

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ಸಲ್ಲಿಸಿದ ನಾಮಪತ್ರಗಳನ್ನು ವಾಪಸ್ ಪಡೆಯಲು ನಾಳೆ ಕೊನೆಯ ದಿನವಾಗಿದ್ದು, ಕಣದಲ್ಲಿರುವ ನಾಲ್ವರು ಅಭ್ಯರ್ಥಿಗಳ ಅವಿರೋಧ ಆಯ್ಕೆ ಘೋಷಣೆಯಾಗಲಿದೆ.

ಪಕ್ಷೇತರ ಅಭ್ಯರ್ಥಿ ಸಂಗಮೇಶ್ ಚಿಕ್ಕನರಗುಂದ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಕಣದಲ್ಲಿರುವ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆಯನ್ನು ಅಧಿಕೃತವಾಗಿ ಘೋಷಣೆ ಮಾಡುವುದು ಮಾತ್ರ ಬಾಕಿ ಇದೆ.

ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ದೇವೇಗೌಡ, ಕಾಂಗ್ರೆಸ್ ಅಭ್ಯರ್ಥಿ ಎಂ. ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಅಭ್ಯರ್ಥಿ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ ಅವರು ನಾಮಪತ್ರ ಸಲ್ಲಿಸಿದ್ದರು. ನಾಲ್ವರ ಅವಿರೋಧ ಆಯ್ಕೆ ಖಚಿತವಾಗಿದ್ದು, ಅವರು ರಾಜ್ಯಸಭೆಗೆ ಪ್ರವೇಶ ಪಡೆಯಲಿದ್ದಾರೆ.

ABOUT THE AUTHOR

...view details