ಬೆಂಗಳೂರು :ಅಶ್ಲೀಲ ಸಿಡಿ ಪ್ರಕರಣ ಸಂಬಂಧ ವಿಶೇಷ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದ ರಮೇಶ್ ಜಾರಕಿಹೊಳಿ ವಿಚಾರಣೆ ಮುಗಿಸಿ ಹೊರ ಬಂದಿದ್ದು, ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.
ಎಸ್ಐಟಿ ವಿಚಾರಣೆಗೆ ಹಾಜರಾದ ರಮೇಶ್ ಜಾರಕಿಹೊಳಿ ; ನಿರೀಕ್ಷಣಾ ಜಾಮೀನು ಅರ್ಜಿಗೆ ಚಿಂತನೆ? - ಸಿಡಿ ಪ್ರಕರಣ ಎಸ್ಐಟಿ ವಿಚಾರಣೆ
ಸುಮಾರು 5 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ತನ್ನ ವಿರುದ್ಧ ಕೇಸು ದಾಖಲಾಗಿರುವ ಕಾರಣ ಅವರು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಲು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ..
ಸಿಡಿ ಯುವತಿ ನೀಡಿದ ದೂರಿನ ಅನ್ವಯ ಇಂದು ಬೆಳಗ್ಗೆ ಆಡುಗೋಡಿಯಲ್ಲಿರುವ ಎಸ್‌ಐಟಿ ಟೆಕ್ನಿಕಲ್ ಸೆಂಟರ್ಗೆ ಬಂದಿದ್ದ ಅವರು, ಸುಮಾರು 5 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ತನ್ನ ವಿರುದ್ಧ ಕೇಸು ದಾಖಲಾಗಿರುವ ಕಾರಣ ಅವರು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಲು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.
ರಮೇಶ್ ಜಾರಕಿಹೊಳಿ ಪರ ವಕೀಲ ಶ್ಯಾಮ್ ಸುಂದರ್ ಮಾತನಾಡಿ, ಮಾಜಿ ಸಚಿವರ ಮನವಿ ಮೇರೆಗೆ ಎಸ್ಐಟಿ ಕಚೇರಿಗೆ ಬಂದಿದ್ದೇನೆ. ಅಧಿಕಾರಿಗಳು ಒಬ್ಬೊಬ್ಬರನ್ನೇ ಕರೆದು ವಿಚಾರಣೆ ನಡೆಸುತ್ತಿದ್ದಾರೆ. ಯುವತಿ ನೀಡಿದ ದೂರಿನ ಮೇರೆಗೆ ಜಾರಕಿಹೊಳಿ ಅವರಿಗೆ ಎಸ್ಐಟಿ ನೋಟಿಸ್ ನೀಡಿತ್ತು ಎಂದರು.