ಕರ್ನಾಟಕ

karnataka

ETV Bharat / city

ರಮೇಶ್ ಜಾರಕಿಹೊಳಿ ಸಿಡಿ ಕೇಸ್: ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದ ಹೈಕೋರ್ಟ್

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಜೂ.27ಕ್ಕೆ ಮುಂದೂಡಿದೆ.

ಹೈಕೋರ್ಟ್ ವಿಚಾರಣೆ
ಹೈಕೋರ್ಟ್ ವಿಚಾರಣೆ

By

Published : May 30, 2022, 9:56 PM IST

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವ ಆದೇಶ ಮತ್ತು ಬ್ಲಾಕ್‌ಮೇಲ್ ಆರೋಪ ಸಂಬಂಧ ಜಾರಕಿಹೊಳಿ ಅವರ ದೂರು ಆಧರಿಸಿ ಸದಾಶಿವನಗರ ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ರದ್ದು ಕೋರಿ ಸಂತ್ರಸ್ತೆ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಜೂನ್ 27ಕ್ಕೆ ಮುಂದೂಡಿದೆ.

ಪ್ರಕರಣದ ಸಂತ್ರಸ್ತೆ ಸಲ್ಲಿಸಿರುವ ಪ್ರತ್ಯೇಕ ಎರಡು ತಕರಾರು ಅರ್ಜಿಗಳು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರ ಏಕಸದಸ್ಯ ಪೀಠದ ಮುಂದೆ ಇಂದು ವಿಚಾರಣೆಗೆ ಬಂದಿದ್ದವು.

ಅರ್ಜಿ ವಿಚಾರಣೆ ಆರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲೆ ಆಕೃತಿ ಧವನ್ ಹಾಜರಾಗಿ, ಸಂತ್ರಸ್ತೆಯ ಪರ ಇಂದಿರಾ ಜೈಸಿಂಗ್ ಪ್ರತಿನಿಧಿಸುತ್ತಿದ್ದಾರೆ. ಆದರೆ, ಅವರು ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಅರ್ಜಿಯನ್ನು ಮುಂದೂಡಬೇಕು ಎಂದು ಕೋರಿದರು. ಮನವಿ ಪರಿಗಣಿಸಿದ ಪೀಠ, ಜೂನ್ 27ರಂದು ಅರ್ಜಿಗಳ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿತು.

(ಓದಿ: 'ಸಿಡಿ ಪ್ರಕರಣ ಕೋರ್ಟ್​​ನಲ್ಲಿದೆ, ಆ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ'... ಹೀಗೆ ಹೇಳಿದ್ಯಾರು?)

ABOUT THE AUTHOR

...view details