ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯು ನಾಳೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿ ಎಸ್ಐಟಿ ಅಧಿಕಾರಿಗಳು ಮತ್ತೆ ನೋಟಿಸ್ ಜಾರಿ ಮಾಡಿದ್ದಾರೆ.
ಯುವತಿ ಪರ ವಕೀಲ ಜಗದೀಶ್ ಮುಖಾಂತರ ಮೂರನೇ ಬಾರಿ ಹಾಗು ಎಸ್ಐಟಿ ಐದು ಬಾರಿ ನೋಟಿಸ್ ಜಾರಿ ಮಾಡಿತ್ತು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ದೂರು ನೀಡಿದ್ದ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಯುವತಿಯ ವೈದ್ಯಕೀಯ ಪರೀಕ್ಷೆ, ಸ್ಥಳ ಮಹಜರು
ಯುವತಿ ವೈದ್ಯಕೀಯ ಪರೀಕ್ಷೆಗಾಗಿ ಹಾಜರಾಗಬೇಕಿದೆ. ಕೃತ್ಯ ನಡೆದ ಸ್ಥಳದ ಬಗ್ಗೆ ಮಹಜರು ಮಾಡಬೇಕಿದೆ. ತನಿಖಾಧಿಕಾರಿ ಮುಂದೆ ಹಾಜರಾಗಿ 161ರಡಿಯಲ್ಲಿ ಹಾಗೂ ಮ್ಯಾಜಿಸ್ಟ್ರೇಟ್ ಮುಂದೆ 164ರಡಿಯಲ್ಲಿ ಹೇಳಿಕೆ ನೀಡಬೇಕಿದೆ. ಅಪರಾಧ ನಡೆದ ಸ್ಥಳ ಗುರುತಿಸುವಿಕೆ, ಪಂಚನಾಮೆ ಸಂದರ್ಭದಲ್ಲಿ ಖುದ್ದು ಹಾಜರಾಗಬೇಕಿರುವ ಅಗತ್ಯವಿರುವುದರಿಂದ ನಾಳೆ ಬೆಳಗ್ಗೆ 10 ಗಂಟೆಗೆ ಕಬ್ಬನ್ ಪಾರ್ಕ್ ಠಾಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.