ಬೆಂಗಳೂರು:ಸಚಿವ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ವಿಡಿಯೋದಲ್ಲಿ ಹಲವಾರು ವಿವಾದಾತ್ಮಕ ಸಂಭಾಷಣೆಗಳು ಸೆರೆಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ.
ಸಂತ್ರಸ್ತೆ ಜೊತೆಗಿನ ಸಚಿವ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ಸಂಭಾಷಣೆಯಲ್ಲಿ ಸಿಎಂ ಯಡಿಯೂರಪ್ಪರನ್ನು ಭ್ರಷ್ಟಾಚಾರಿ, ಮಾಜಿ ಸಿಎಂ ಸಿದ್ದರಾಮಯ್ಯರನ್ನು ಒಳ್ಳೆಯ ವ್ಯಕ್ತಿ ಎಂದು ಹೇಳಿರುವ ಸಂಭಾಷಣೆ ಸೆರೆಯಾಗಿದೆ.