ಬೆಂಗಳೂರು:ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಲು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸದ್ಯದಲ್ಲೇ ದೆಹಲಿಗೆ ತೆರಳಲಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಜಲಸಂಪನ್ಮೂಲ ಇಲಾಖೆಯ ಹಲವು ಯೋಜನೆಗಳಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಈ ಸಭೆಯಲ್ಲಿ ಮಾತನಾಡಿದ ಅವರು, ಮೇಕೆದಾಟು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರದ ಸಚಿವರನ್ನು ಒತ್ತಾಯಿಸಲಾಗುವುದು. ಅದಕ್ಕಾಗಿ ಶೀಘ್ರದಲ್ಲಿ ನವದೆಹಲಿಗೆ ತೆರಳಲು ಯೋಚಿಸಿರುವುದಾಗಿ ತಿಳಿಸಿದರು.